ಶಾಂತಿಗಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ನಿರಶನ ಪ್ರಹಸನ
ಈ ಸುದ್ದಿಯನ್ನು ಶೇರ್ ಮಾಡಿ
ಭೋಪಾಲ್, ಜೂ.10-ಐವರು ರೈತರನ್ನು ಬಲಿ ತೆಗೆದುಕೊಂಡ ಪೊಲೀಸ್ ಗೋಲಿಬಾರ್ ಖಂಡಿಸಿ ಮಧ್ಯಪ್ರದೇಶದಲ್ಲಿ ಕೃಷಿಕರ ಪ್ರತಿಭಟನೆ ತೀವ್ರಗೊಂಡಿರುವಾಗಲೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶಾಂತಿ ಸ್ಥಾಪನೆಗಾಗಿ ರಾಜಧಾನಿ ಭೋಪಾಲ್ನ ದಸರಾ ಮೈದಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮುಖ್ಯಮಂತ್ರಿಯವರ ನಿರಶನವನ್ನು ದೊಡ್ಡ ನಾಟಕ ಎಂಬುದಾಗಿ ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿದೆ.
ತಮ್ಮ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು, ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಧರಣಿ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments