ಶಾಕಿಂಗ್ : ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಮತ್ತೆ ಹೆಚ್ಚಳ
ಈ ಸುದ್ದಿಯನ್ನು ಶೇರ್ ಮಾಡಿ
ನವದೆಹಲಿ. ಜ.15 : ವಾಹನ ಸವಾರರಿಗೆ ಶಾಕಿಂಗ್ ಸುದ್ದಿ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ, ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ ರೂ.0.42 ಮತ್ತು ಡೀಸೆಲ್ ಬೆಲೆಯಲ್ಲಿ 1.03ರೂ. ಹೆಚ್ಚಳವಾಗಿದ್ದು ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಹೊಸ ವರ್ಷದಂದೇ ಪೆಟ್ರೋಲ್ ಬೆಲೆಯಲ್ಲಿ ರೂ.1.29 ಮತ್ತು ಡೀಸೆಲ್ ಬೆಲೆಯಲ್ಲಿ 0.97 ರೂ. ಹೆಚ್ಚಳ ಮಾಡಲಾಗಿತ್ತು. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳುವುದು ಕಷ್ಟವಾಗಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಳನ್ನೂ ನಿರ್ಧರಿಸಲಾಗುತ್ತದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments