ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನಕ್ಕೆ ಕಡಿವಾಣ ಹಾಕುವಂತರೇ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

School-Studentsw

ನವದೆಹಲಿ, ಡಿ.14- ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಮತ್ತು ಮದ್ಯ ಸೇವನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಆರು ತಿಂಗಳ ಒಳಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯೊಂದನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಮತ್ತು ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ಈ ಸೂಚನೆ ನೀಡಿದ್ದು, ಮಾದಕ ವಸ್ತು ಮತ್ತು ಮದ್ಯ ಸೇವನೆ ಪ್ರಕರಣಗಳ ಬಗ್ಗೆ ರಾಷ್ಟ್ರೀಯ ಸಮೀಕ್ಷೆಯೊಂದನ್ನು ಸಹ ನಡೆಸುವಂತೆ ಕೇಂದ್ರಕ್ಕೆ ಸಲಹೆ ಮಾಡಿದೆ.

ದೇಶಾದ್ಯಂತ ಶಾಲೆಗಳಲ್ಲಿ ಇಂಥ ಮತ್ತೇರಿಸುತ್ತಿರುವ ಪದಾರ್ಥಗಳನ್ನು ಸೇವಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಬಗ್ಗೆ ಮಾಹಿತಿ ಒದಗಿಸುವಂತೆಯೂ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಈ ಬಗ್ಗೆ ಕೆಲವು ಮುಖ್ಯ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, ಶಾಲಾ ಮಕ್ಕಳನ್ನು ನಿಯಂತ್ರಿಸದೇ ಹಾಗೆಯೇ ಬಿಟ್ಟರೆ ಅವರು ಮಾದಕ ವ್ಯಸನಿಗಳಾಗುತ್ತಾರೆ. ಮುಂದೊಂದು ದಿನ ಅವರು ಮಾದಕ ವಸ್ತು ಮಾರಾಟಗಾರರೂ ಆಗುತ್ತಾರೆ ಎಂದು ಎಚ್ಚರಿಕೆ ನೀಡಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin