ಶಾಲೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

accident
ಮಂಡ್ಯ,ಆ.19-ಶಾಲಾ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ಕೆ.ಆರ್.ಪೇಟೆ ತಾಲ್ಲೂಕಿನ ಐಕನಹಳ್ಳಿಯಲ್ಲಿ ನಡೆದಿದೆ. ಕಿಕ್ಕೇರಿಯಲ್ಲಿರುವ ಕೇಂಬ್ರಿಡ್ಜ್ ಶಾಲೆಗೆ ಸೇರಿದ ವಾಹನ ಚಾಲಕನ ನಿಯಂತ್ರಣ ತಪ್ಪಿ ಐಕನಹಳ್ಳಿ ಬಳಿ ಇರುವ ಕೆರೆ ಏರಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ವಿದ್ಯುತ್ ತಂತಿಗಳು ತುಂಡಾಗದಿದ್ದರಿಂದ ವಿದ್ಯುತ್ ಸ್ಪರ್ಶವಾಗದೆ ಹೆಚ್ಚಿನ ಅನಾಹುತ ತಪ್ಪಿದೆ.

ಮಕ್ಕಳನ್ನು ತಕ್ಷಣ ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಬರಿಗೊಂಡಿದ್ದ ಮಕ್ಕಳನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆ ತಿಳಿಯುತ್ತಿದ್ದಂತೆ ಪೋಷಕರು ಶಾಲೆಯತ್ತ ಧಾವಿಸಿ ತಮ್ಮ ಮಕ್ಕಳಿಗೆ ಏನಾಯಿತು ಎಂದು ಗಾಬರಿಯಿಂದ ಶಾಲೆಯತ್ತ ಧಾವಿಸಿದರು. ವಾಹನ ಅಪಘಾತಗೊಂಡು ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿಯುತ್ತಿದ್ದಂತೆ ಅವರ ಆತಂಕ ಮತ್ತಷ್ಟು ಹೆಚ್ಚಾಯಿತು. ಪೊಲೀಸರು ಅವರನ್ನು ಸಮಾಧಾನಪಡಿಸಿ ಮಕ್ಕಳನ್ನು ಅವರಿಗೆ ಒಪ್ಪಿಸಿ ಸಂತೈಸಿ ಮನೆಗೆ ಕಳುಹಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin