ಶಿಕ್ಷಣ ಸಂಸ್ಥೆಗೆ ನೀಡಿರುವ ಜಾಗ ವಾಪಸ್ ಪಡೆಯಲು ಒತ್ತಾಯಿಸಿ ಪಾದಯಾತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

kunigal
ಕುಣಿಗಲ್, ಆ.24-ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಅರಮನೆ ಹೊನ್ನಮಾಚನಹಳ್ಳಿಯ ಸರ್ವೆ ನಂ.23ರಲ್ಲಿ ಸಿದ್ಧಾರ್ಥ ವಿದ್ಯಾಸಂಸ್ಥೆಗೆ ನೀಡಿರುವ ಜಮೀನಿನ ಗುತ್ತಿಗೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪಂಚಾಯತ್ ರಾಜ್ ಕಾನೂನು ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಮಿತಿಯ ಜಿಲ್ಲಾಧ್ಯಕ್ಷ ಜಯರಾಮಯ್ಯ ನೇತೃತ್ವದಲ್ಲಿ ಇಂದು ಸಮಿತಿಯ ನೂರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿಡಿದ ಜಯರಾಮಯ್ಯ, 1982ರಲ್ಲಿ ಸರ್ಕಾರ ಪ್ರತಿಷ್ಠಿತ ಸಿದ್ಧಾರ್ಥ ಸಂಸ್ಥೆಗೆ ಸರ್ವೆ ನಂ.23ರಲ್ಲಿ 50 ಎಕರೆ ಜಮೀನನ್ನು ಗುತ್ತಿಗೆ ನೀಡಿತ್ತು.
ಆದರೆ, 35 ವರ್ಷವಾದರೂ ಆ ಜಾಗದಲ್ಲಿ ಯಾವುದೇ ಕಾರ್ಯಾರಂಭವಾಗಿಲ್ಲ. ಆದ್ದರಿಂದ ಕೂಡಲೇ ಸರ್ಕಾರ ಗುತ್ತಿಗೆಯನ್ನು ರದ್ದುಪಡಿಸಿ ಸಾರ್ವಜನಿಕರ ಅನುಕೂಲಕ್ಕೆ ಬಳಸಿಕೊಳ್ಳಲು ಅವಕಾಶ ನೀಡುವಂತೆ ಒತ್ತಾಯಿಸಿದರು.
ಅಲ್ಲದೆ, ಹುಲಿಯೂರು ದುರ್ಗದಲ್ಲೇ ಇರುವುದರಿಂದ ಸರ್ಕಾರಿ ಕಚೇರಿಗೆ ಹಾಗೂ ಸಣ್ಣ ಕೈಗಾರಿಕೆಗೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಹಾಗೂ ಉದ್ಯಾನವನಕ್ಕೆ ಬಳಸಿಕೊಂಡರೆ ಅನುಕೂಲವಾಗುತ್ತದೆ ಎಂದರು.
ಸಂಸ್ಥೆ ಮುಖ್ಯಸ್ಥರಾದ ಡಾ.ಜಿ.ಪರಮೇಶ್ವರ್ ಅವರು, ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿದ್ದು, ಕಾನೂನು ಬಲ್ಲವರಾಗಿದ್ದಾರೆ. ಸರ್ಕಾರದಿಂದ ಗುತ್ತಿಗೆ ಪಡೆದ ಯಾವುದೇ ಜಮೀನುಗಳನ್ನು ಬಳಸಿಕೊಳ್ಳದಿದ್ದರೆ ಅಂತಹ ಜಮೀನುಗಳ ಗುತ್ತಿಗೆಯನ್ನು ರದ್ದುಪಡಿಸಬೇಕೆಂದು ಸರ್ಕಾರವೇ ಆದೇಶ ನೀಡಿದ್ದು, ಈ ಬಗ್ಗೆ ವಿಧಾನಸಭಾ ಅಧಿವೇಶನದಲ್ಲೂ ಕೂಡ ಅಂಗೀಕಾರವಾಗಿದೆ. ಆದ್ದರಿಂದ ಕೂಡಲೇ ರದ್ದುಗೊಳಿಸಬೇಕು. ಅದಕ್ಕಾಗಿ 30 ದಿನಗಳ ಗಡುವು ನೀಡಿದ್ದು, ರದ್ದುಗೊಳಿಸದಿದ್ದರೆ ಸಂಸ್ಥೆ ಎದುರು ಆಮರಣಾಂತ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin