ಶಿಡ್ಲಘಟ್ಟ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಈ ಸುದ್ದಿಯನ್ನು ಶೇರ್ ಮಾಡಿ

M-Rajanna

ಚಿಕ್ಕಬಳ್ಳಾಪುರ , ಮೇ 12- ಶಾಸಕ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣೆ ವೇಳೆ ಪ್ರಚಾರ ಕಾರ್ಯಕ್ಕಾಗಿ ಸುತ್ತಾಡಿ ಬಳಲಿದ್ದ ರಾಜಣ್ಣ ಅವರಿಗೆ ಜ್ವರ ಬಂದಿತ್ತು. ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ರಕ್ತದೊತ್ತಡ ಕಡಿಮೆಯಾಗಿ ನಿತ್ರಾಣಗೊಂಡಿದ್ದ ರಾಜಣ್ಣ ಅವರನ್ನು ಕೂಡಲೇ ಕುಟುಂಬ ಸದಸ್ಯರು ಶಿಡ್ಲಘಟ್ಟದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ನಿನ್ನೆ ರಾತ್ರಿಯಿಂದಲೂ ತೀವ್ರ ನಿಗಾ ಘಟಕದಲ್ಲಿ ರಾಜಣ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಬಾರಿ ಜೆಡಿಎಸ್‍ನಿಂದ ಟಿಕೆಟ್ ಪಡೆದು ಶಾಸಕರಾಗಿ ಆಯ್ಕೆಯಾಗಿದ್ದ ರಾಜಣ್ಣ ಅವರಿಗೆ ಈ ಬಾರಿ ಪಕ್ಷದ ಟಿಕೆಟ್ ಕೈ ತಪ್ಪಿತ್ತು. ಮೇಲೂರು ರವಿಕುಮಾರ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಇದರಿಂದ ರಾಜಣ್ಣ ಕಂಗಾಲಾಗಿದ್ದರು. ಆದರೂ ಪಟ್ಟು ಬಿಡದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

Facebook Comments

Sri Raghav

Admin