ಶಿಮ್ಲಾ : ಬಸ್ ನದಿಗೆ ಉರುಳಿ 43 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Bus-Falla

ಶಿಮ್ಲಾ, ಏ.19- ಬಸ್ಸೊಂದು ನದಿಗೆ ಉರುಳಿ 43 ಮಂದಿ ದುರಂತ ಸಾವಿಗೀಡಾದ ಘಟನೆ ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ನೆರ್ವಾದಲ್ಲಿ ಸಂಭವಿಸಿದೆ.
ಕಡಿದಾದ ಮಾರ್ಗದಲ್ಲಿ ಚಲಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ತೋನ್ ನದಿಗೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 43ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಉತ್ತರಾಖಂಡ್-ಹಿಮಾಚಲ ಪ್ರದೇಶದ ಗಡಿ ಭಾಗದಲ್ಲಿ ಈ ದುರಂತ ಸಂಭವಿಸಿದೆ. ಈ ನತದೃಷ್ಟ ಬಸ್‍ನಲ್ಲಿ 56 ಮಂದಿ ಪ್ರಯಾಣಿಕರಿದ್ದರು. ಸ್ಥಳಕ್ಕೆ ಉನ್ನತಾಧಿಕಾರಿಗಳು ಭೇಟಿ ನೀಡಿದ್ದು, ರಕ್ಷಣೆ ಮತ್ತು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin