ಶಿವಕುಮಾರ ಸ್ವಾಮೀಜಿಯವರಿಗೆ ರತ್ನ ಪ್ರಶಸ್ತಿ ನೀಡಬೇಕು : ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ತುಮಕೂರು, ಏ.2- ವಿಶ್ವವೇ ಬೆರಗಾಗುವ ರೀತಿಯಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಯವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುವ ಮೂಲಕ ಇತಿಹಾಸದ ಪುಟ ಸೇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಆದರ್ಶ ಪ್ರೀಯರು. ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ಶಿಕ್ಷಣದ ಮೂಲಕ ಸಮಾಜದ ಬದಲಾವಣೆ ಸಾಧ್ಯ  ಎನ್ನುವಲ್ಲಿ ನಂಬಿಕೆ ಇಟ್ಟುಕೊಂಡವರಲ್ಲಿ ಶ್ರೀಗಳು ಮೊದಲಿಗರು ಎಂದರು.

ಶ್ರೀಗಳಿಗೆ ಭಾರತ ರತ್ನಕ್ಕಾಗಿ ನಾನೂ ಹಲವು ಬಾರಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹಾಗೂ ನರೇಂದ್ರ ಮೋದಿಯವರಿಗೆ ಹಲವು ಬಾರಿ ಪತ್ರ ಬರೆದಿದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ವಿಶ್ವದಲ್ಲೇ ತುಮಕೂರು ಆಕರ್ಷಣೆ ಕೇಂದ್ರವಾಗಿದೆ. ಇದೇ 4ರಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕೆ ಶ್ರೀಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದರು. ನಂತರ ಮಠದಿಂದ ತೆರದ ಬಸ್‍ನಲ್ಲಿ ರೋಡ್ ಶೋ ಮೂಲಕ ಕ್ಯಾತ್ಸಂದ್ರ, ಬಿ.ಹೆಚ್. ರಸ್ತೆ, ಬಟವಾಡಿ ಮೂಲಕ ಶಿವಕುಮಾರ ಸ್ವಾಮಿ ವೃತ್ತ, ಭದ್ರಮ್ಮ ಸರ್ಕಲ್‍ನಿಂದ ಟೌನ್‍ಹಾಲï ಬಳಿ ಬಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು. ನಂತರ ಕುಣಿಗಲ್‍ನಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಿ ನಂತರ ಮಾಗಡಿಗೆ ತೆರಳಿ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Facebook Comments

Sri Raghav

Admin