ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಮಾ.1-ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಕುಳ್ಳಾರ್ ನಿವಾಸಿ ಪಾಶ್ರ್ವನಾಥ್ ಜೈನ್ (60) ಮೃತಪಟ್ಟ ವೃದ್ಧ.

ಜೈನ್ ಅವರಿಗೆ ಮೊದಲು ಜ್ವರ ಕಾಣಿಸಿಕೊಂಡಿದ್ದು, ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಜ್ವರ ಕಡಿಮೆ ಆಗದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ.

ಕಳೆದ ಒಂದು ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇಲ್ಲಿಯವರೆಗೂ ಜಿಲ್ಲಾಯಾದ್ಯಂತ 11 ಮಂದಿ ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದು ತಿಳಿದುಬಂದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin