ಶಿಷ್ಟಾಚಾರ ಉಲ್ಲಂಘಿಸಿರುವುದು ಸರಿಯಲ್ಲ : ಸಚಿವ ಎಂ.ಬಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

MB-Patil-01
ಬೆಂಗಳೂರು, ಜ.28- ನಾವು ಕಾನೂನು ಬಾಹಿರವಾಗಿ ಯಾವುದೇ ಕೆಲಸ ಮಾಡಿಲ್ಲ. ಮಹದಾಯಿ ಕಾಮಗಾರಿಯಲ್ಲಿ ಪಾರದರ್ಶಕವಾಗಿದ್ದೇವೆ. ಕಾಮಗಾರಿ ಪರಿಶೀಲನೆ ಬೇಕಾದರೆ ಗೋವಾದವರು ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದರು. ಹಾಗಾಗಿ ಅವರು ಬಂದಿರಬಹುದು, ಆದರೆ ಶಿಷ್ಟಾಚಾರ ಉಲ್ಲಂಘಿಸಿರುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಹೇಳಿದರು.

ಬಾಗಲಕೋಟೆ ಜಿಲ್ಲೆ, ಹುನಗುಂದದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಹದಾಯಿ ನದಿ ವಿವಾದ ನ್ಯಾಯಾಧಿಕರಣದಲ್ಲಿ ವಿಚಾರಣೆಯಲ್ಲಿದೆ. ಕಾನೂನು ಬಾಹಿರವಾಗಿ ನಾವು ಯಾವುದೇ ಕೆಲಸ ಮಾಡಿಲ್ಲ. ಈ ವಿಷಯದಲ್ಲಿ ಪಾರದರ್ಶಕವಾಗಿದ್ದೇವೆ. ಶಿಷ್ಟಾಚಾರ ಪಾಲನೆ ಮಾಡದೆ ಕಳ್ಳತನದಿಂದ ಬಂದು ಹೋಗುವುದು ಸರಿಯಾದ ಕ್ರಮವಲ್ಲ ಎಂದು ಎಂ.ಬಿ.ಪಾಟೀಲ್ ಗುಡುಗಿದರು. ಕಾಮಗಾರಿ ಪರಿಶೀಲನೆಗೆ ಅವಕಾಶ ನೀಡದಿದ್ದರೆ ನ್ಯಾಯಾಧಿಕಣದ ವಿಚಾರಣೆ ಸಂದರ್ಭದಲ್ಲಿ ತೊಂದರೆಯಾಗುತ್ತದೆ. ಕಾಮಗಾರಿಯನ್ನು ಬೇಕಾದರೆ ಪರಿಶೀಲನೆ ಮಾಡಿಕೊಳ್ಳಲಿ. ಕದ್ದು ಮುಚ್ಚಿ ಕಾಮಗಾರಿ ನಡೆಸುತ್ತಿಲ್ಲ. ಪಾರದರ್ಶಕವಾಗಿಯೇ ಕಾಮಗಾರಿ ಮಾಡುತ್ತಿದ್ದೇವೆ. ಈ ರೀತಿ ಯಾವುದೇ ಪೂರ್ವ ಮಾಹಿತಿ ಇಲ್ಲದೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುವ ಅಗತ್ಯವೇನಿತ್ತು ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

Facebook Comments

Sri Raghav

Admin