ಶೀಘ್ರದಲ್ಲೇ ಬಿಬಿಎಂಪಿಯಲ್ಲಿ ಖಾಲಿ ಇರುವ 10,320 ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Session--jarge--01

ಬೆಂಗಳೂರು, ಫೆ.8- ಬಿಬಿಎಂಪಿಯಲ್ಲಿ 10,320 ಹುದ್ದೆಗಳು ಖಾಲಿ ಇದ್ದು ಶೀಘ್ರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ರಾಮಚಂದ್ರಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿಯಲ್ಲಿ 17,391 ಹುದ್ದೆಗಳು ಮಂಜೂರಾಗಿದ್ದು, 10,320 ಖಾಲಿ ಇರುವ ಹುದ್ದೆಗಳ ಪೈಕಿ 5811 ಪೌರಕಾರ್ಮಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ನಿಯಮಾವಳಿರೂಪಿಸಿ ಶೀಘ್ರ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಬಿಬಿಎಂಪಿಯಲ್ಲಿ ಮಂಜೂರಾಗಿರುವ ಹುದ್ದೆಗಳ ಪೈಕಿ ಶೇ.42ರಷ್ಟು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಶೇ.58 ಹುದ್ದೆಗಳು ಖಾಲಿ ಇರುವ ಪರಿಣಾಮ ಬೆಂಗಳೂರಿನ ಸ್ವಚ್ಛತೆ ಜನರ ಆರೋಗ್ಯ ಕಾಮಗಾರಿಗಳ ಅನುಷ್ಠಾನವನ್ನು ಕೈಗೊಳ್ಳುವ ದೃಷ್ಟಿಯಿಂದ ಕೆಲವು ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಂದ ನಿಯೋಜನೆ ಮೇಲೆ ಪಡೆದುಕೊಂಡು ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin