ಶೀತ, ನೆಗಡಿ, ಕೆಮ್ಮು, ತಲೆನೋವು, ಜ್ವರ ನಿವಾರಿಸಲು ಉಪಾಯ ಇಲ್ಲಿದೆ ನೋಡಿ

ಈ ಸುದ್ದಿಯನ್ನು ಶೇರ್ ಮಾಡಿ

health
ಅನೇಕರಿಗೆ ಮಳೆಯಲ್ಲಿ ನೆನೆಯುವುದರಿಂದ ಶೀತ, ನೆಗಡಿ, ಕೆಮ್ಮು, ತಲೆನೋವು, ಜ್ವರ ಉಂಟಾಗುತ್ತದೆ. ಆಗ ಮೆಣಸು, ಶುಂಠಿ, ಜೀರಿಗೆಗಳನ್ನು 1:2:3ರ ಪ್ರಮಾಣದಲ್ಲಿ ಸೇರಿಸಿ ಕಷಾಯವನ್ನು ತಯಾರಿಸಿ ಅದಕ್ಕೆ ಬೆಲ್ಲ ಸೇರಿಸಿ ತೆಗೆದುಕೊಂಡರೆ, ಕಫ ಮತ್ತು ಶೀತದಿಂದ ಉಂಟಾದ ಜ್ವರ ಕಡಿಮೆಯಾಗುತ್ತದೆ. ಕೆಲವು ವೇಳೆ ಅಸಾಕ್ಮ್ಯ (ಅಲರ್ಜಿ)ಯಿಂದ ಗಂಟಲು ಕೆರೆತ, ಕೆಮ್ಮುಗಳು ಉಂಟಾಗುತ್ತದೆ. ಶೀತದಿಂದ ಹೆಚ್ಚಾಗುವ ಈ ಕೆಮ್ಮು ರಾತ್ರಿಯಲ್ಲಿ ಉಲ್ಬಣಗೊಂಡು ನಿದ್ದೆಗೆ ತೊಂದರೆಯನ್ನುಂಟುಮಾಡುತ್ತದೆ. ಆಗ ಎರಡು ಮೆಣಸಿನ ಕಾಳುಗಳನ್ನು ಒಂದೆರಡು ಹರಳು ಉಪ್ಪನ್ನು ಸೇರಿಸಿ ದವಡೆಯಲ್ಲಿ ಇಟ್ಟುಕೊಂಡು ರಸವನ್ನು ನುಂಗುತ್ತಿದ್ದರೆ ಗಂಟಲು ಕೆರೆತ ಕಡಿಮೆಯಾಗಿ ಕೆಮ್ಮು ನಿಲ್ಲುತ್ತದೆ. ರಾತ್ರಿ ಚೆನ್ನಾಗಿ ನಿದ್ದೆ ಬರುತ್ತದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin