ಶೀಲ ಶಂಕಿಸಿ ಪತ್ನಿ ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Lifetime

ತುಮಕೂರು,ಸೆ.10-ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದ ಆರೋಪಿಗೆ ಮಧುಗಿರಿಯ 4ನೇ ಅಧಿಕ ಜಿಲ್ಲಾಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಘಟನೆ ವಿವರ:
ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಓಬನಹಳ್ಳಿಯ ವಾಸಿ ತಿಮ್ಮಯ್ಯ ತನ್ನ ಪತ್ನಿ ಗಿರಿಜಮ್ಮ(50)ಳ ಶೀಲ ಶಂಕಿಸಿ ಜೂ.16ರಂದು ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಮೃತಳ ಪುತ್ರಿ, ನನ್ನ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಎಂದು ಕೊರಟಗೆರೆ ಠಾಣೆಗೆ ದೂರು ನೀಡಿದ್ದರು.   ಈ ಸಂಬಂಧ ಇನ್‍ಸ್ಪೆಕ್ಟರ್ ಚಂದ್ರಶೇಖರ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮೇಲ್ಕಂಡ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin