ಅಶೋಕ್ ಖೇಣಿ, ರೂಪಾ ಶಶಿಧರ್ ನಾಮಪತ್ರ ಅಂಗೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

Roopa-Shashidhar--01
ಬೆಂಗಳೂರು/ಕೋಲಾರ,ಏ.26- ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್ ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದ್ದರೆ, ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ, ಸಂಸದ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಕೆಜಿಎಫ್ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ನಿನ್ನೆ ಈ ಮೂರು ಅಭ್ಯರ್ಥಿಗಳ ವಿರುದ್ಧ ಆಕ್ಷೇಪ ವ್ಯಕ್ತವಾಗಿತ್ತು. ರೂಪಾ ಶಶಿಧರ್ ಅವರ ವಿರುದ್ಧ ಎರಡು ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅವರ ಹೆಸರಿದೆ ಎಂಬ ಆರೋಪ ಮಾಡಲಾಗಿತ್ತು. ಅಶೋಕ್ ಖೇಣಿ ಅವರು ಅಮೆರಿಕದಲ್ಲಿ ವಾಸವಾಗಿದ್ದು, ಭಾರತದ ನಾಗರೀಕತ್ವ ಹೊಂದಿಲ್ಲ ಎಂಬ ಆರೋಪ ಮಾಡಲಾಗಿತ್ತು.

ಇಂದು ನಾಮಪತ್ರಗಳ ಪರಿಶೀಲನೆ ನಡೆಸಿದ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ನಾಮಪತ್ರ ಕ್ರಮಬದ್ದವಾಗಿರುವ ಬಗ್ಗೆ ಪ್ರಕಟಣೆ ನೀಡಿದ್ದಾರೆ ಎಂದು ಮೂಲಗಳೂ ತಿಳಿಸಿವೆ. ಶಾಸಕ ಕೊತ್ತನೂರು ಮಂಜುನಾಥ್ ಸಲ್ಲಿಸಲಾಗಿದ್ದ ಜಾತಿ ಪ್ರಮಾಣ ಪತ್ರ ಅಸಿಂಧುವೆಂದು ರಾಜ್ಯ ಉಚ್ಛ ನ್ಯಾಯಾಲಯ ನೀಡಿದ್ದ ತೀರ್ಪಿನ ಹಿನ್ನೆಲೆಯಲ್ಲಿ ಅವರ ನಾಮಪತ್ರ ಅಸಿಂಧುಗೊಂಡಿದೆ ಎಂದು ಚುನಾವಣಾಧಿಕಾರಿ ರಾಚಪ್ಪ ಘೋಷಿಸಿದ್ದಾರೆ. ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅವರು ಬೈರಾಗಿ ಜನಾಂಗದವರಾಗಿದ್ದು , 2013ರ ಚುನಾವಣೆ ವೇಳೆ ಬುಡುಗ ಜಂಗಮದವರೆಂದು ಪ್ರಮಾಣ ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮುನಿ ಆಂಜಿನಪ್ಪ ಎಂಬುವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಲ್ಲದೆ ಶಾಸಕ ಕೊತ್ತನೂರು ಮಂಜುನಾಥ್ ಬುಡುಗ ಜಂಗಮ ಜನಾಂಗಕ್ಕೆ ಸೇರಿದವರಲ್ಲ. ಬೈರಾಗಿ ಜನಾಂಗದವರು ಎಂದು ವಾದಿಸಿದ್ದರು. ಕೋಲಾರ ಜಿಲ್ಲಾಧಿಕಾರಿಗಳು ಸಹ ಜಿಲ್ಲೆಯಲ್ಲಿ ಬುಡುಗ ಜನಾಂಗದವರೇ ಇಲ್ಲ ಎಂದು ಮಾಹಿತಿ ಒದಗಿಸಿದ್ದರು.

Facebook Comments

Sri Raghav

Admin