ಶ್ರೀಬೀರಲಿಂಗೇಶ್ವರ ದೇವಾಲಯ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

Temple--02

ತುಮಕೂರು. ಮಾ.13 : ತಿಪಟೂರು ತಾಲ್ಲೂಕಿನ ಆಲೂರಿನಲ್ಲಿ ಶ್ರೀಬೀರಲಿಂಗೇಶ್ವರ ದೇವಾಲಯದ ಉದ್ಘಾಟನೆ ಹಾಗೂ ಕಳಸಾ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು. ಸುತ್ತಮುತ್ತಲ ಗ್ರಾಮದಿಂದ ಸಾವಿರಾರು ಜನರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೀರೇಶ್ವರ ಸ್ವಾಮಿಯ ಮಹಾಪೂಜೆ, ಕಳಸಾ ಪ್ರತಿಷ್ಠಾಪನೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನಸಂತಪರ್ಣೆ ಏರ್ಪಡಿಸಲಾಗಿತ್ತು. ಇದೇ ವೇಳೆ ಬೀರೇಶ್ವರ ದೇವಾಲಯದ ಅಧ್ಯಕ್ಷ, ತುಮಕೂರು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಸಿ.ಎನ್ ಬಾಲವರ್ಧನ್ ಅವರಿಗೆ ಬೆಳ್ಳಿ ಕಿರೀಟವಿಟ್ಟು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕನಕ ಗುರುಪೀಠದ ಶಿವಾನಂದಪುರಿ ಮಹಾಸ್ವಾಮೀಜಿ, ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮಿಜಿ, ಬಿಂದುಶಖರ್ ಒಡೆಯರ್, ಶಾಸಕ ಷಡಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook Comments

Sri Raghav

Admin