ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Pramod-Muthalik

ಬಾಗಲಕೋಟೆ, ಜ.10-ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಧೋಳ ತಾಲೂಕಿನ ಡವಳೇಶ್ವರ ಗ್ರಾಮದಲ್ಲಿನ ಸ್ಮಶಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಮಾಡಲು ಬಾಗಲಕೋಟೆ ಜಿಲ್ಲಾಧ್ಯಕ್ಷರ ಭವನಕ್ಕೆ ಬಂದು ಪ್ರತಿಭಟನೆ ಮಾಡಿದ್ದ ಪ್ರಮೋದ್ ಮುತಾಲಿಕ್ ಈ ಸಂದರ್ಭದಲ್ಲಿ ಕೋಮು ಸೌಹಾರ್ದತೆ ಕದಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ನಬಿ ಟಂಕಸಾಲಿ ಅವರಿಂದ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin