ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚುನಾವಣಾ ಗಿಮಿಕ್ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

siddu

ಕೊಪ್ಪಳ, ಆ.29- ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಒಂದು ಚುನಾವಣಾ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.  ಯಾವತ್ತೂ ಹಿಂದುಳಿದವರ ಪರ ಮಾತನಾಡದ ಬಿಜೆಪಿಯವರು ಈಗ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಹೆಸರಿನಲ್ಲಿ ಚುನಾವಣಾ ಗಿಮಿಕ್ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.  ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡಲ್ ಆಯೋಗದ ವರದಿಯನ್ನು ವಿರೋಸಿ ನ್ಯಾಯಾಲಯಕ್ಕೆ ಹೋದವರು ಬಿಜೆಪಿಯವರು. ಹಿಂದುಳಿದವರ ಮೀಸಲಾತಿಯನ್ನು ಕಸಿಯಲು ಪ್ರಯತ್ನಿಸಿದವರು. ಆಗ ವಿರೋಸಿದ ಈಶ್ವರಪ್ಪ ಈಗ ಹಿಂದ ಕಟ್ಟಿಕೊಂಡು ಓಡಾಡುತ್ತಿದ್ದಾರೆ ಎಂದು ಹೇಳಿದರು.

ಮೈಸೂರು ಜಿಲ್ಲಾಕಾರಿಯಾಗಿದ್ದ ಶಿಖಾ ಅವರ ವರ್ಗಾವಣೆಯಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಸ್ಪಷ್ಟನೆ ನೀಡಿದರು.  ಭಟ್ಕಳ ಪಿಎಸ್‌ಐ ರಾಜೀನಾಮೆ ನೀಡಿರುವ ಪ್ರಕರಣಕ್ಕೆ ಸಂಬಂಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ಇಲಾಖೆ ಒಂದು ಶಿಸ್ತಿನ ಇಲಾಖೆ. ಈ ರೀತಿ ಮಾಡುವುದು ಸರಿಯಲ್ಲ. ಈ ರೀತಿಯಾದ ಟ್ರೆಂಡ್ ಸ್ಟಾರ್ಟ್ ಆಗಿದೆ ಎಂದು ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin