ಸಂಚಾರಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಸವಾರನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

traffic -police

ಮೈಸೂರು, ಮೇ 4- ದ್ವಿಚಕ್ರ ವಾಹನದಲ್ಲಿ ಏಕಮುಖ ಸಂಚಾರದಲ್ಲಿ ಬಂದ ವಾಹನ ಸವಾರನನ್ನು ಪ್ರಶ್ನಿಸಿದ ಸಂಚಾರಿ ಪೊಲೀಸ್ ಕಾನ್‍ಸ್ಟೆಬಲ್ ಮೇಲೆಯೇ ಹಲ್ಲೆ ನಡೆಸಿದ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.ನಗರದ ಮುಜೀಬ್ ಬಂಧಿತ ಆರೋಪಿ.ಈತ ಮೇ 2ರಂದು ತನ್ನ ಬೈಕ್‍ನಲ್ಲಿ ಐದು ಮಕ್ಕಳನ್ನು ಕೂರಿಸಿಕೊಂಡು ಏಕಮುಖ ರಸ್ತೆಯಲ್ಲಿ ಬರುತ್ತಿರುವುದನ್ನು ಕರ್ತವ್ಯದಲ್ಲಿದ್ದ ಕಾನ್‍ಸ್ಟೆಬಲ್ ಆರ್ಮುಗಂ ತಡೆದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಮುಜೀಬ್ ಮತ್ತು ಆರ್ಮುಗಂ ನಡುವೆ ಮಾತಿನ ಚಕಮಕಿ ನಡೆದಿದೆ.ಈ ವೇಳೆ ಸಂಚಾರಿ ಕಾನ್‍ಸ್ಟೆಬಲ್ ಆರ್ಮುಗಂ ಮೇಲೆ ಹಲ್ಲೆ ನಡೆಸಿದ್ದರಿಂದ ನಜರ್‍ಬಾದ್ ಠಾಣೆ ಪೊಲೀಸರು ಮುಜೀಬ್‍ನನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin