ಸಂವಿಧಾನ ಪೀಠ ಸ್ಥಾಪನೆ ಪರಿಶೀಲಿಸಲಾಗುವುದು : ಸುಪ್ರೀಂಕೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Suprem-Court

ನವದೆಹಲಿ, ಫೆ.23-ರಾಜಧಾನಿ ದೆಹಲಿಗೆ ಲೆಫ್ಟಿನೆಂಟ್ ಗೌರ್ನರ್ ಅವರೇ ಆಡಳಿತಾತ್ಮಕ ಮುಖ್ಯಸ್ಥರು ಎಂಬ ಹೈಕೋರ್ಟ್ ತೀರ್ಪು ವಿರುದ್ಧ ಎಎಪಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಗೆ ಸಂವಿಧಾನ ಪೀಠ ಸ್ಥಾಪಿಸಬೇಕೆಂಬ ಕೋರಿಕೆಯನ್ನು ಪರಾಮರ್ಶಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ದೆಹಲಿ ಸರ್ಕಾರದ ಪರ ವಕೀಲ ಗೋಪಾಲ್ ಸುಬ್ರಮಣ್ಯಂ ಈ ಸಂಬಂಧ ಇಂದು ನ್ಯಾಯಾಲಯಕ್ಕೆ ಮನವಿ ಮಾಡಿ ಪ್ರಕರಣ ಈಗಾಗಲೇ ಐವರು ನ್ಯಾಯಾಧೀಶರ ಪೀಠದಲ್ಲಿದೆ. ಈ ಪ್ರಕರಣದ ತ್ವರಿತ ವಿಚಾರಣೆ ನಡೆಸುವ ಅಗತ್ಯವಿದೆ ಎಂದರು.   ವಕೀಲರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವು, ಸಂವಿಧಾನ ಪೀಠ ರಚಿಸಬೇಕೆಂಬ ಕೋರಿಕೆಯನ್ನು ನಾನು ಪರಾಮರ್ಶಿಸುತ್ತೇವೆ ಎಂದು ತಿಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin