ಸಂಸತ್‍ನಲ್ಲೂ ಪ್ರತಿಧ್ವನಿಸಿದ ಡಿಕೆಶಿ ಮನೆ ಮೇಲಿನ ಐಟಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Upper--01

ನವದೆಹಲಿ, ಆ.2- ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಗುಜರಾತ್ ಶಾಸಕರು ವಾಸ್ತವ್ಯ ಹೂಡಿರುವ ಈಗಲ್ ಟನ್ ರೆಸಾರ್ಟ್ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ಸರಣಿ ದಾಳಿ ವಿಷಯ ಸಂಸತ್‍ನ ಉಭಯ ಸದನಗಳಲ್ಲೂ ಪ್ರಸ್ತಾಪವಾಗಿ ಭಾರೀ ಗದ್ದಲಕ್ಕೆ ಕಾರಣವಾಯಿತು. ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಹತಾಶೆ ಮತ್ತು ರಾಜಕೀಯ ದುರುದ್ದೇಶದಿಂದ ಈ ದಾಳಿಗಳು ನಡೆದಿವೆ ಎಂದು ಟೀಕಿಸಿದರು.

ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಧಮನ ಮಾಡಲು ದುರುದ್ದೇಶದಿಂದ ರಾಜಕೀಯ ಪ್ರೇರಿತವಾಗಿ ಈ ದಾಳಿಗಳನ್ನು ನಡೆಸಿರುವುದು ಖಂಡನಾರ್ಹ ಎಂದು ಛೇಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾದ, ವಾಗ್ವಾದ ನಡೆಯಿತು. ಇದೇ ವೇಳೆ ರಾಜ್ಯಸಭೆಯಲ್ಲೂ ಇದೇ ವಿಷಯದ ಬಗ್ಗೆ ಕಾಂಗ್ರೆಸ್ ಆನಂದ್‍ಶರ್ಮ ವಿಷಯ ಪ್ರಸ್ತಾಪಿಸಿದಾಗ ವಿತ್ತ ಸಚಿವ ಅರುಣ್‍ಜೇಟ್ಲಿ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ನಡೆದಿರುವ ಐಟಿ ದಾಳಿಯಲ್ಲಿ ಸರ್ಕಾರದ ಕೈವಾಡವಿಲ್ಲ. ಅಲ್ಲಿ ತಂಗಿರುವ ಗುಜರಾತ್‍ನ ಶಾಸಕರನ್ನು ಯಾವುದೇ ವಿಚಾರಣೆಗೂ ಒಳಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಭ್ರಷ್ಟಾಚಾರದ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲು ಐಟಿಗೆ ಎಲ್ಲ ಅಧಿಕಾರವಿದೆ. ಕೆಲವೊಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin