ಸಂಸತ್ ಕಲಾಪಕ್ಕೆ ಅಡ್ಡಿ : ಕಾಂಗ್ರೆಸ್ ವಿರುದ್ಧ ಅನಂತ್‍ಕುಮಾರ್ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar
ನವದೆಹಲಿ, ಮಾ.13- ಸಂಸತ್ತಿನ ಅಧಿವೇಶನದಲ್ಲಿ ಉಭಯ ಸದನಗಳ ಕಲಾಪಕ್ಕೆ ಅಡ್ಡಿಯಾಗುತ್ತಿರುವುದಕ್ಕೆ ಕಾಂಗ್ರೆಸ್ ಕಾರಣ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂದು ಬೆಳಗ್ಗೆ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರೂ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಮಾರ್ಚ್ 5ರಿಂದಲೂ ಕಲಾಪಗಳಿಗೆ ಅಡ್ಡಿ ಉಂಟು ಮಾಡುತ್ತಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದರು.

ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಶಾ ಸೇರಿದಂತೆ ಅನೇಕ ಧುರೀಣರು ಭಾಗವಹಿಸಿದ್ದರು.

Facebook Comments

Sri Raghav

Admin