ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಮೂವರ ವಿರುದ್ಧ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Naleen-Kumar--01
ಬಂಟ್ವಾಳ, ಎ. 23- ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. 20ರಂದು ಬಿ.ಸಿ.ರಸ್ತೆ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಕ್ಯಾ. ಗಣೇಶ್ ಕಾರ್ಣಿಕ್, ಹರಿಕೃಷ್ಣ ಬಂಟ್ವಾಳ್ ತಮ್ಮ ಭಾಷಣದಲ್ಲಿ ರೈ ಅವರನ್ನು ವೈಯಕ್ತಿಕವಾಗಿ ನಿಂದಿಸುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿಸಂಹಿತೆ ಉಲ್ಲಂಘನಾ ಕಣ್ಗಾವಲು ಅಧಿಕಾರಿ ಅಬ್ದುಲ್ ರಝಾಕ್ ಅವರು ಈ ಬಗ್ಗೆ ದೂರು ನೀಡಿದ್ದು, ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin