ಸಕ್ಕರೆ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Kukkawada--01

ದಾವಣಗೆರೆ, ಏ.28- ಇಲ್ಲಿನ ಕುಕ್ಕವಾಡಾ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರ ದುರಸ್ತಿ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ನಾಗರಾಜ್.ಜಿ (30) ಹಾಗೂ ನಾಗರಾಜ್.ಎಂ.ಕೆ (26) ಎಂದು ಗುರುತಿಸಲಾಗಿದೆ.ನಿನ್ನೆ ಕಾರ್ಖಾನೆಯಲ್ಲಿ ಯಂತ್ರವೊಂದನ್ನು ದುರಸ್ತಿ ಮಾಡುವಾಗ ಅನಿಲ ಸೋರಿಕೆ ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಒಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಬ್ಬು ಅರೆದ ನಂತರ ಹೊರ ಬರುವ ತ್ಯಾಜ್ಯದಿಂದ ಉಂಟಾಗುವ ಅನಿಲದ ವಾಸನೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು , ಹದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Facebook Comments

Sri Raghav

Admin