ಸಚಿವ ಎಚ್.ವೈ.ಮೇಟಿ ಅವರನ್ನು ಸಂಪುಟದಿಂದ ವಜಾಗೊಳಿಸಲು ಜನಾರ್ದನ ಪೂಜಾರಿ ಆಗ್ರಹ
ಮಂಗಳೂರು, ಡಿ.12-ರಾಸಲೀಲೆ ಪ್ರಕರಣದಲ್ಲಿರುವ ಸಿಲುಕಿರುವ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಮಾಜಿ ಸಚಿವ ಜನಾರ್ದನ ಪೂಜಾರಿ ಇಂದಿಲ್ಲಿ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ಸದಸ್ಯರನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.ಇತ್ತಿಚೆಗಷ್ಟೆ ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಶಿಕ್ಷಣ ಸಚಿವ ತನ್ವೀರ್ಸೇಠ್ ಅವರು ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆಯಿಂದ ಪಕ್ಷಕ್ಕೆ ಕಳಂಕ ಬಂದಿದ್ದು, ಇದರ ಬೆನ್ನಲ್ಲೇ ಮತ್ತೊಂದು ರಾಸಲೀಲೆ ಪ್ರಕರಣದಿಂದ ಪಕ್ಷಕ್ಕೆ ಮತ್ತಷ್ಟು ಧಕ್ಕೆ ಯಾಗಿದ್ದು, ಇಂತಹವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಬ್ಬರೇ ನಾಯಕರೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : Eesanje News 24/7 ನ್ಯೂಸ್ ಆ್ಯಪ್ – Click Here to Download