ಸಚಿವ ಡಿ.ಕೆ.ಶಿವಕುಮಾರ್‍ರವರಿಗೆ 55ನೆ ಹುಟ್ಟುಹಬ್ಬ

ಈ ಸುದ್ದಿಯನ್ನು ಶೇರ್ ಮಾಡಿ

DKShivakumar-01

ಕನಕಪುರ, ಮೇ 17- ಇಂಧನ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‍ರವರ 55ನೆ ಹುಟ್ಟು ಹಬ್ಬ ಆಚರಿಸಲಾಯಿತು.
ಹುಟ್ಟು ಹಬ್ಬದ ಅಂಗವಾಗಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಪೂಜೆ ನೆರವೇರಿಸಲಾಯಿತು. ಇದೇ ವೇಳೆ ಕಾರ್ಯಕರ್ತ ಮುಖಂಡರು ಜನ್ಮದಿನದ ಅಂಗವಾಗಿ ಶುಭ ಹಾರೈಸಿದರು.ಕಸಬಾ ಹೋಬಳಿ, ಚೀರಣಕುಪ್ಪೆ ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 7 ಘಂಟೆಯಿಂದಲೆ ದೇವರಿಗೆ ಹೋಮ ಹಾಗೂ ವಿಶೇಷ ಪೂಜೆ ಅಲಂಕಾರ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಸಚಿವ ಡಿ.ಕೆ.ಶಿವಕುಮಾರ್‍ರವರ ತಾಯಿ ಗೌರಮ್ಮ, ಚೀರಣಕುಪ್ಪೆ ಗ್ರಾಮದ ಯುವ ಕಾಂಗ್ರೆಸ್ ಮುಖಂಡ ಮಹೇಶ್ (ಐನೋರ್) , ನಗರಸಭೆ ಮಾಜಿ ಅಧ್ಯಕ್ಷ ರಾಮಚಂದ್ರು ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin