ಸಚಿವ ರಮನಾಥ್ ರೈ ತೀವ್ರ ಅಸ್ವಸ್ಥ, ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Ramanath-Rain

ಬೆಂಗಳೂರು. ಮಾ.16 : ಅರಣ್ಯ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ್ ರೈ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ದಾಖಲಾಗಿದ್ದಾರೆ.   ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ .  ಇಂದು ವಿಧಾನಸಭಾ ಅಧಿವೇಶನದಲ್ಲಿ ಸಚಿವ ರಮಾನಾಥ್ ರೈ ಪಾಲ್ಗೊಂಡಿದ್ದರು. ಬಳಿಕ ರಕ್ತದೊತ್ತಡದ ಪರಿಣಾಮ ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ಲಾಭಯವಾಗಬೇಕಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

Facebook Comments

Sri Raghav

Admin