ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತು ತೀರ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಚಿತ್ರದುರ್ಗ, ಮಾ.15- ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಹೊಸದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ ಕೆಲವು ಮಠಾಧೀಶರು ತಮ್ಮನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪ್ರತ್ಯೇಕ ಲಿಂಗಾಯಿತ ಧರ್ಮದ ಅಗತ್ಯವಿಲ್ಲ. ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಹಾಗಾಗಿ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ನನ್ನ ಪುತ್ರ ಡಾ.ಯತೀಂದ್ರ ಕಾಂಗ್ರೆಸ್‍ನಿಂದ ಸ್ಪರ್ಧಿಸಲು ಟಿಕೆಟ್ ಕೇಳೇ ಇಲ್ಲ. ಆದರೆ, ಜನರ ಅಪೇಕ್ಷೆ ಮೇರೆಗೆ ಕಣಕ್ಕಿಳಿಯಲು ಅವನು ತೀರ್ಮಾನಿಸಿದ್ದಾನೆ. ಆದರೆ, ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ. ಇದನ್ನು ತೀರ್ಮಾನಿಸುವುದು ನಮ್ಮ ಪಕ್ಷದ ಹೈಕಮಾಂಡ್ ಎಂದು ತಿಳಿಸಿದರು. ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಭಾಷಣ ಮಾಡಿ ಹೋಗುತ್ತಾರೆ. ಆದರೆ, ಉತ್ತರ ಪ್ರದೇಶದಲ್ಲೇ ಬಿಜೆಪಿ ಸೋತಿದೆ. ಅಲ್ಲಿ ಸಲ್ಲದವರು ಇಲ್ಲಿ ಸಲ್ಲುವರೇ ? ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಸಿದ್ದರಾಮಯ್ಯ ಹೇಳಿದರು.

Facebook Comments

Sri Raghav

Admin