ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ನಾನು ರೆಡಿ : ಸಚಿವ ಎಚ್.ವೈ.ಮೇಟಿ

ಈ ಸುದ್ದಿಯನ್ನು ಶೇರ್ ಮಾಡಿ

meti9

ಬೆಂಗಳೂರು, ಡಿ.13- ರಾಸಲೀಲೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಸಿದ್ಧನಾಗಿದ್ದೇನೆ ಎಂದು ಅಬಕಾರಿ ಸಚಿವ ಎಚ್.ವೈ.ಮೇಟಿ ಮುಖ್ಯಮಂತ್ರಿಯವರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಾಸಲೀಲೆ ನಡೆಸಿದ್ದಾರೆನ್ನಲಾದ ಪ್ರಕರಣ ಮಾಧ್ಯಮಗಳಲ್ಲಿ ವಿವಿಧ ರೀತಿಯಲ್ಲಿ ವರದಿಯಾಗಿದ್ದು, ಪ್ರಕರಣದಲ್ಲಿರುವ ಮಹಿಳೆ ಮತ್ತು ಆರ್‍ಟಿಐ ಕಾರ್ಯಕರ್ತರ ಗೊಂದಲದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸರ್ಕಾರಕ್ಕೆ, ಪಕ್ಷ ಸಂಘಟನೆಗೆ ಮುಜುಗರವಾಗುವ ಸಾಧ್ಯತೆ ಇದೆ. ಈ ಘಟನೆಯಿಂದ ನಿಮಗೆ ಕಳಂಕ ಬರುವುದು ಬೇಡ. ನಾನು ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆಂದು ತಿಳಿದುಬಂದಿದೆ.

ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿಯಾಗಿದ್ದ ಮೇಟಿ, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿ ಇದರಲ್ಲಿ ನನ್ನದೇನೂ ತಪ್ಪಿಲ್ಲ. ಆದರೂ ಈ ರೀತಿ ಅಪಪ್ರಚಾರವಾಗುತ್ತಿದೆ. ಅಗತ್ಯಬಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧವಾಗಿದ್ದೇನೆ ಎಂದು ತಿಳಿಸಿ ಬಂದಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin