ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಇಳಿಕೆ
ಈ ಸುದ್ದಿಯನ್ನು ಶೇರ್ ಮಾಡಿ
ನವದೆಹಲಿ,ಮಾ.31- ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಕೇಂದ್ರ ಸರ್ಕಾರ ಶೇ 0.1ರಷ್ಟು ಕಡಿಮೆಗೊಳಿಸಿದೆ. ಇದರಿಂದಾಗಿ ಬ್ಯಾಂಕ್ಗಳು ತನ್ನ ಠೇವಣಿ ದರಗಳನ್ನು ಇಳಿಸಲು ಸಹಕಾರಿಯಾಗಲಿದೆ. ಪಿಪಿಎಫ್, ಕಿಸಾನ್ ವಿಕಾಸ್ ಪತ್ರ ಮತ್ತು ಸುಕನ್ಯ ಸಮೃದ್ಧಿ ಯೋಜನೆ ಇತ್ಯಾದಿಯಂತಹ ಸಣ್ಣ ಉಳಿತಾಯ ಯೋಜನೆಗಳ ಮೇಲೆ ಏಪ್ರಿಲ್-ಜೂನ್ ತ್ರೈಮಾಸಿಕ ಅವಧಿಗಾಗಿ ಶೇ. 0.1ರಷ್ಟು ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments