ಸತೀಶ್ ಜಾರಕಿ ಹೊಳಿ ಅವರ ಅಳಿಯ ರವಿ ಪಾಟೀಲ್ ಜೆಡಿಎಸ್ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

Ravi-Patil

ರಾಯಚೂರು, ಏ.20-ಗ್ರಾಮೀಣ ಕ್ಷೇತ್ರದಿಂದ ಕೈ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಸತೀಶ್ ಜಾರಕಿ ಹೊಳಿ ಅವರ ಅಳಿಯ ರವಿ ಪಾಟೀಲ್ ಅವರು ಇಂದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ರವಿ ಪಾಟೀಲ್‍ಗೆ ಕಾಂಗ್ರೆಸ್‍ನಿಂದ ಟಿಕೆಟ್ ನೀಡುವುದಾಗಿ ಹೇಳಿ ಕೊನೆ ಘಳಿಗೆಯಲ್ಲಿ ಟಿಕೆಟ್ ನೀಡದ ಕಾರಣ ಜೆಡಿಎಸ್‍ಗೆ ಸೇರ್ಪಡೆಗೊಂಡರು.

ಗ್ರಾಮಾಂತರ ಕ್ಷೇತ್ರದಲ್ಲಿ ಸುಮಾರು 5 ವರ್ಷಗಳಿಂದ ಗುರುತಿಸಿಕೊಂಡಿರುವ ರವಿ ಪಾಟೀಲ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಇದರಿಂದ ಬೇಸತ್ತು ಕಾರ್ಯಕರ್ತರ ಸಭೆ ಕರೆದು ಬೇರೆ ಪಕ್ಷದಿಂದ ಸ್ಪರ್ಧಿಸಲು ತೀರ್ಮಾನಿಸಿ ಜೆಡಿಎಸ್‍ಗೆ ಸೇರ್ಪಡೆಯಾಗಿದ್ದಾರೆ.  ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದವು. ಆದರೆ ಜೆಡಿಎಸ್ ಮಾತ್ರ ಎರಡೂ ಪಕ್ಷಗಳನ್ನು ಮಣಿಸಲು ಹೊಸ ಮುಖಕ್ಕೆ ಕಾದು ಕುಳಿತಿತ್ತು. ಆದರೆ ಕೊನೆ ಕ್ಷಣದಲ್ಲಿ ರವಿ ಪಾಟೀಲ್ ಜೆಡಿಎಸ್ ಸೇರಿದ್ದರಿಂದ ಎರಡೂ ಪಕ್ಷಗಳಲ್ಲಿ ನಡುಕ ಉಂಟಾಗಿದೆ. ಇವರು ಜೆಡಿಎಸ್‍ನಿಂದ ಸ್ಪರ್ಧಿಸಿದರೆ ಗ್ರಾಮೀಣ ಭಾಗದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

Facebook Comments

Sri Raghav

Admin