ಸದ್ಯದಲ್ಲೇ ಜಾತಿಗಣತಿ ವರದಿ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

H-Anjaneya

ಬೆಂಗಳೂರು, ಜು.26- ಸಾಮಾಜಿಕ, ಶೈಕ್ಷಣಿಕ ಆಧಾರದ ಮೇಲೆ ನಡೆಸಲಾಗಿರುವ ಜಾತಿಗಣತಿ ವರದಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಈ ವರದಿಯನ್ನು ಬಿಡುಗಡೆ ಮಾಡುತ್ತಿಲ್ಲ. ಯಾವಾಗ ಬಿಡುಗಡೆ ಮಾಡಿದರೂ ಮಾಹಿತಿ ಒದಗಿಸುವುದಷ್ಟೆ ಇದರ ಉದ್ದೇಶ ಎಂದರು. ವರದಿ ಬಿಡುಗಡೆ ಹಿನ್ನೆಲೆಯಲ್ಲಿ ಯಾವುದೇ ದುರುದ್ದೇಶ ಇಲ್ಲ. ಚುನಾವಣೆಯೇ ವರದಿ ಬಿಡುಗಡೆಗೆ ಕಾರಣವಲ್ಲ. ಈಗಾಗಲೇ ಪೂರ್ಣಗೊಂಡಿದ್ದು, ಸದ್ಯದಲ್ಲೇ ಬಿಡುಗಡೆ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin