ಸದ್ಯದಲ್ಲೇ ಸಿದ್ದರಾಮಯ್ಯ ಸರ್ಕಾರ ಪತನಗೊಂಡರೂ ಆಶ್ಚರ್ಯವಿಲ್ಲ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-vs-Siddaramaiah

ಶಿವಮೊಗ್ಗ,ಡಿ.12– ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಲಘುವಾಗಿ ಮಾತನಾಡಿದ್ದಾರೆ. ಆದರೆ ಅವರ ಸಹೋದ್ಯೋಗಿಗಳೇ ಜೈಲು ಪಾಲಾಗಲಿದ್ದು ಅವರ ಹೆಸರನ್ನು ಬಹಿರಂಗ ಪಡಿಸಬೇಕು ಎಂದು ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.   ಸದ್ಯದಲ್ಲೇ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಪತನಗೊಂಡರೂ ಆಶ್ಚರ್ಯವಿಲ್ಲ ಎಂದು ಭವಿಷ್ಯ ನುಡಿದ ಯಡಿಯೂರಪ್ಪ ಅವರು ಇನ್ನು 15 ದಿನಗಳಲ್ಲಿ ಮೂರ್ನಾಲ್ಕು ಸಚಿವರು ರಾಜೀನಾಮೆ ನೀಡಲಿದ್ದು , ಅವರೆಲ್ಲರಿಗೂ ಶಿಕ್ಷೆಯಾಗುವ ಸಾಧ್ಯತೆಯೂ ಇದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಅವರ ಸಂಪುಟ ಸಚಿವರು ಭಾಗಿ ಗಳಾಗಿರುವ ಹಗರಣಗಳನ್ನು ಮುಚ್ಚಿ ಹಾಕಲು ಸಿದ್ದರಾಮಯ್ಯ ವಿಫಲ ಯತ್ನ ನಡೆಸಿದ್ದಾರೆ. ಆದರೆ ಆರೋಪಗಳು ಗುರುತರವಾಗಿರುವುದರಿಂದ ಅವುಗಳನ್ನು ಮುಚ್ಚಿ ಹಾಕಲು ಸಾಧ್ಯವಾಗಿಲ್ಲ.   ಈ ಹಿನ್ನೆಲೆಯಲ್ಲಿ ಸ್ವತಃ ಸಿದ್ದರಾಮಯ್ಯನವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ. ತಮ್ಮ ಪ್ರಮುಖ ಸಚಿವರುಗಳೊಂದಿಗೆ ಸಿದ್ದರಾಮಯ್ಯ ಕೂಡ ಅಧಿಕಾರ ಕಳೆದುಕೊಳ್ಳುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗಳು ಸಂಪೂರ್ಣವಾಗಿ ಕುಸಿದು ಹೋಗಿದ್ದು , ಅರಾಜಕತೆ ಉಂಟಾಗಿದೆ. ಅಧಿಕಾರಿಗಳ ಮೇಲೆ ಸಚಿವರಿಗಾಗಲಿ, ಮುಖ್ಯಮಂತ್ರಿಯವರಿಗಾಗಲಿ ನಿಯಂತ್ರಣವೇ ಇಲ್ಲ.

ಹಲವು ಸಚಿವರು ತಾವೇ ಸ್ವತಃ ಭ್ರಷ್ಟಾಚಾರಗಳಲ್ಲಿ ಮತ್ತು ಭಾರೀ ಹಗರಣಗಳಲ್ಲಿ ತೊಡಗಿದ್ದಾರೆ. ಆಡಳಿತ ಯಂತ್ರ ತೀರಾ ನೆಲಕಚ್ಚಿದೆ. ಇದಕ್ಕೆ ಸಾಕ್ಷಿ ಇತ್ತೀಚೆಗೆ ಬಂಧಿತರಾಗಿರುವ ಚಿಕ್ಕರಾಯಪ್ಪ , ಜಯಚಂದ್ರ ಅವರು ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.   ಅನೇಕ ಹಗರಣಗಳಲ್ಲಿ ಭಾಗಿಯಾಗಿ ರುವ ಕೆಲ ಪ್ರಭಾವಿ ಸಚಿವರನ್ನು ರಕ್ಷಿಸಲು ಸಿದ್ದರಾಮಯ್ಯ ಇನ್ನಿಲ್ಲದ ಪ್ರಯತ್ನ ನಡೆಸಿದರು. ಆದರೆ ಅದ್ಯಾ ವುದೂ ಫಲ ನೀಡಲಿಲ್ಲ. ಹಾಗಾಗಿ ಈಗ ಸಿದ್ದರಾಮಯ್ಯ ಅವರೇ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin