ಸನ್ನಡತೆಯ ಆಧಾರದ ಮೇಲೆ 92 ಕೈದಿಗಳಿಗೆ ‘ರಿಲೀಸ್ ಭಾಗ್ಯ’

ಈ ಸುದ್ದಿಯನ್ನು ಶೇರ್ ಮಾಡಿ

Released-01

ಬೆಂಗಳೂರು, ಮಾ.7- ಸನ್ನಡತೆಯ ಆಧಾರದ ಮೇಲೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 92 ಕೈದಿಗಳಿಗೆ ಇಂದು ಬಿಡುಗಡೆ ಭಾಗ್ಯ ದೊರೆಯಿತು. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 31 ಜೈಲು ಹಕ್ಕಿಗಳನ್ನು ಸನ್ನಡತೆಯ ಆಧಾರದಲ್ಲಿ ಅವಧಿಪೂರ್ವವಾಗಿ ಬಿಡುಗಡೆ ಮಾಡಲಾಯಿತು. ಮೈಸೂರು ಕಾರಾಗೃಹದಿಂದ 16 ಕೈದಿಗಳು, ಕಲಬುರಗಿ 14, ಬಳ್ಳಾರಿ 16, ಬೆಳಗಾವಿ 9, ಬಿಜಾಪುರ 9, ಧಾರವಾಡ ಕಾರಾಗೃಹದಿಂದ 7 ಕೈದಿಗಳು ಸೇರಿದಂತೆ ಒಟ್ಟು 92 ಸನ್ನಡತೆ ಕೈದಿಗಳನ್ನು ಇಂದು ಬಿಡುಗಡೆ ಮಾಡಲಾಯಿತು.

ಪ್ರತಿಬಾರಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವದಂದು ಮಾತ್ರ ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಸನ್ನಡತೆ ಕೈದಿಗಳನ್ನು ಬೇರೆ ಬೇರೆ ಅವಧಿಯಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin