ಸನ್ನಡತೆ ಆಧಾರದಲ್ಲಿ 108 ಕೈದಿಗಳಿಗೆ ಇಂದೇ ಬಿಡುಗಡೆ ಭಾಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

Jail

ಬೆಂಗಳೂರು, ಡಿ.13- ಸನ್ನಡತೆ ಆಧಾರದಲ್ಲಿ 108 ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಇಂದು ಸಂಜೆ ಈ ಎಲ್ಲ ಕೈದಿಗಳನ್ನು ರಾಜ್ಯದ ವಿವಿಧ ಜೈಲುಗಳಿಂದ ಬಿಡುಗಡೆ ಮಾಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಮಾನ್ಯವಾಗಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂದು ಸನ್ನಡತೆಯ ಕೈದಿಗಳನ್ನು ಬಿಡುಗಡೆ ಮಾಡಲಾಗುವುದು. ಈಗ ಅದಕ್ಕೂ ಮುಂಚೆಯೇ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಗೃಹ ಸಚಿವ ರಾಮಲಿಂಗಾರೆಡ್ಡಿ ಈ ಸಂಜೆಯೊಂದಿಗೆ ಮಾತನಾಡಿ, ಸನ್ನಡತೆಯ 108 ಕೈದಿಗಳನ್ನು ಬಿಡುಗಡೆ ಮಾಡುವಂತೆ ರಾಜಭವನಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು.

ರಾಜ್ಯಪಾಲರು ಈ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಕೈದಿಗಳನ್ನು ಇಂದೇ ಬಿಡುಗಡೆ ಮಾಡಲಾಗುತ್ತಿದೆ. ಕೇಂದ್ರ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಬಂದಿಖಾನೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು, ಬೆಂಗಳೂರು ನಗರಾಭಿವೃದ್ಧಿ ಸಚಿವ ಜಾರ್ಜ್ ಮುಂತಾದವರು ಭಾಗವಹಿಸಲಿದ್ದು, ಕೈದಿಗಳನ್ನು ಬಿಡುಗಡೆ ಮಾಡಲಾಗುವುದು. ಇದಲ್ಲದೆ, ಸನ್ನಡತೆ ಆಧಾರದಲ್ಲಿ ಸಮ್ಮತಿ ಪಡೆದಿರುವ ರಾಜ್ಯದ ವಿವಿಧ ಜೈಲುಗಳಲ್ಲಿರುವ ಕೈದಿಗಳನ್ನು ಕೂಡ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

Facebook Comments

Sri Raghav

Admin