ಸಮಾಜದ ಹೊಣೆಗಾರಿಕೆ ನಮ್ಮ ಮೇಲಿದೆ

ಈ ಸುದ್ದಿಯನ್ನು ಶೇರ್ ಮಾಡಿ

hikkamangaluru-advocates

ಚಿಕ್ಕಮಗಳೂರು, ಸೆ.26- ಸಮಾಜ ಮತ್ತು ಮಕ್ಕಳು ಅಡ್ಡದಾರಿ ತುಳಿಯದಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರಭಾವತಿ ಎಂ.ಹಿರೇಮಠ್ ಹೇಳಿದರು.ನಗರದ ತಾಪಂ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸ್ನೇಹಿ ಕಾನೂನು ಮತ್ತು ರಕ್ಷಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಅಪವಾದಗಳು ಮೌಲ್ಯಗಳನ್ನು ಅಲುಗಾಡಿಸುತ್ತಿವೆ. ಮಕ್ಕಳು ಒಳ್ಳೆಯ ಅಂಕ ತೆಗೆಯಬೇಕೆಂದು ಬಯಸುತ್ತಿದ್ದೇವೆ ಹೊರತು ಸಂಸ್ಕಾರ-ಸಂಸ್ಕೃತಿ ಕಲಿಸುತ್ತಿಲ್ಲ. ಇಂದು ಟಿವಿಯಲ್ಲಿ ಮೂಡಿಬರುವ ಧಾರವಾಹಿ ಮತ್ತಿತರ ಕಾರ್ಯಕ್ರಮಗಳನ್ನು ನೋಡಿ ಹಾದಿತಪ್ಪುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ಪೊಷಕರು ಹಣ ಬೆನ್ನಟ್ಟಿ ಹೋಗುತ್ತಿದ್ದಾರೆ. ಮಕ್ಕಳಿಗೆ ಒಳ್ಳೆಯ ನಡೆ-ನುಡಿ ಕಲಿಸಲು ಸಮಯ ಇಲ್ಲ. ತಂದೆ-ತಾಯಿಗೆ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬ ಅರಿವಿಲ್ಲ ಎಂದು ವಿಷಾದಿಸಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ದಯಾನಂದ ವಿ.ಹಿರೇಮಠ ಮಾತನಾಡಿ, ಪ್ರತಿಯೊಬ್ಬ ಮಗುವಿಗೆ ಗುರಿ ಇರಬೇಕು. ಸಾಧಿಸಲು ಹಿಂದೆ ಗುರು ಇರಬೇಕು. ಗುರು ಇಲ್ಲದಿದ್ದರೆ ಏನು ಸಾಧಿಸಲು ಸಾಧ್ಯವಿಲ್ಲ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಸಿ.ಬಸವರಾಜಯ್ಯ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಚ್.ಸಿ.ನಟರಾಜ್, ತಾಪಂ ಇಒ ವೈ.ಜಿ.ಸುಂದರೇಶ್ ಮತ್ತಿತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin