ಸಮಾಜ ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯ ಬೇಡ : ಸುಪ್ರೀಂ ಮಹತ್ವದ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

supreme-ocurt

ನವದೆಹಲಿ, ಮಾ.27-ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸರ್ಕಾರದ ಸೌಲಭ್ಯ ಮತ್ತು ಸವಲತ್ತುಗಳನ್ನು ಹೊಂದಲು ಆಧಾರ್ ಕಡ್ಡಾಯ ಎಂಬ ಗೊಂದಲದಲ್ಲಿ ಸಿಲುಕಿದ್ದ ಜನರಿಗೆ ಇದರಿಂದ ನಿರಾಳವಾದಂತಾಗಿದೆ. ಈ ಕುರಿತು ಏಳು ನ್ಯಾಯಾಧೀಶರ ಪೀಠದಿಂದ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ. ಆದರೆ ತ್ವರಿತವಾಗಿ ಈ ಪ್ರಕ್ರಿಯೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮೊಬೈಲ್ ಫೋನ್ ಮತ್ತು ಡ್ರೈವಿಂಗ್ ಲೈಸೆನ್ಸ್‍ಗಳನ್ನು ಪಡೆಯಲು ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿರುವ ಸಂದರ್ಭದಲ್ಲೇ ಸುಪ್ರೀಂಕೋರ್ಟ್‍ನ ಈ ಹೇಳಿಕೆ ಭಾರೀ ಮಹತ್ವ ಪಡೆದುಕೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin