ಸಮ್ಮಿಶ್ರ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಮಂಡ್ಯ, ಆ.14-ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ವಜಾಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಬಿ.ಎಸ್.ಗೌಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.ಕುಮಾರಸ್ವಾಮಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿರುವ ಅವರು, ಈ ಸರ್ಕಾರದ ಖರ್ಚು-ವೆಚ್ಚದ 70 ಪುಟಗಳ ಬಿಲ್ಲುಗಳನ್ನು ದೂರಿನ ಜೊತೆ ಸಲ್ಲಿಸಿದ್ದಾರೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಖರ್ಚನ್ನು ಜೆಡಿಎಸ್ ಭರಿಸಬೇಕು ಎಂದಿರುವ ಅವರು, ಅಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ತೃತೀಯ ರಂಗದ ನಾಯಕರು ಸ್ಟಾರ್ ಹೊಟೇಲ್‍ಗಳಲ್ಲಿ ವಾಸ್ತವ್ಯ ಹೂಡಲು 42 ಲಕ್ಷ ರೂ. ಖರ್ಚಾಗಿದೆ. ಈ ಹಣವನ್ನು ಸರ್ಕಾರ ಭರಿಸಿದೆ. ಸರ್ಕಾರ ರಚಿಸುವ ಮುನ್ನವೇ ಇಷ್ಟೊಂದು ಹಣ ಖರ್ಚು ಮಾಡಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ, ಸರ್ಕಾರದ ಮುಖ್ಯಕಾರ್ಯದರ್ಶಿ ಹಾಗೂ ಕುಮಾರಕೃಪಾ ಗೆಸ್ಟ್‍ಹೌಸ್‍ನ ಅಧೀಕ್ಷಕರನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin