ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಟೀಮ್ ಇಂಡಿಯಾ

ಈ ಸುದ್ದಿಯನ್ನು ಶೇರ್ ಮಾಡಿ

Team-India--01

ಕಾನ್ಪುರ,ಅ.28- ನಾಳೆ ಇಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ದದ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‍ನ 3ನೇ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿರುವ ಭಾರತಕ್ಕೆ ಕಿವೀಸ್ ಪ್ರಬಲ ಎದುರಾಳಿಯಾಗಿದೆ. ಈಗಾಗಲೇ ಈ ಎರಡೂ ತಂಡಗಳು 1-1 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿದೆ. ಹೀಗಾಗಿ ನಾಳೆ ನಡೆಯಲಿರುವ ಪಂದ್ಯ ಹೈವೋಲ್ಟೇಜ್ ಕುತೂಹಲ ಕೆರಳಿಸಿದೆ.

ನಾಯಕ ವಿರಾಟ್ ಕೊಹ್ಲಿ ಮತ್ತು ತಂಡಕ್ಕೆ ನ್ಯೂಜಿಲೆಂಡ್ ನಾಳೆ ಇಲ್ಲಿನ ಗ್ರೀನ್‍ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ದಿಟ್ಟ ಉತ್ತರ ನೀಡಿ ಸರಣಿ ಗೆಲ್ಲುವ ವಿಶ್ವಾಸವನ್ನು ಹೊಂದಿದೆ. ಕೊಹ್ಲಿ ಬಳಗ ಕೇನ್ ವಿಲಿಯಮ್‍ಸನ್ ನೇತೃತ್ವದ ತಂಡವನ್ನು ಲಘುವಾಗಿ ಪರಿಗಣಿಸಿಲ್ಲ, ಮೊದಲ ಪಂದ್ಯದಲ್ಲಿ ಭಾರತವನ್ನು ಮಣಿಸಿದ ನ್ಯೂಜಿಲೆಂಡ್ ಎರಡನೇ ಹಣಾಹಣಿಯಲ್ಲಿ ಜಯ ಸಾಧಿಸಿ ಸರಣಿ ಗೆಲ್ಲುವ ವಿಶ್ವಾಸ ಹೊಂದಿತ್ತು. ಆದರೆ ಭಾರತದ ಬೌಲರ್‍ಗಳ ದಿಟ್ಟ ಮತ್ತು ಸಮಯೋಚಿತ ಆಟದಿಂದ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿತು. ಹೀಗಾಗಿ ನಾಳಿನ ಪಂದ್ಯ ಭಾರೀ ಕುತೂಹಲ ಕೆರಳಿಸಿದೆ.

ತಂಡಗಳು:

ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಮನೀಶ್ ಪಾಂಡೆ, ಖೇದರ್ ಜಾದವ್, ದಿನೇಶ್ ಕಾರ್ತಿಕ್, ಎಂ.ಎಸ್.ಧೋನಿ(ವಿಕೆಟ್‍ಕೀಪರ್) ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರ , ಭುವನೇಶ್ವರ್ ಕುಮಾರ್ ಮತ್ತು ಶಾರದ್ ಠಾಕೂರ್ ತಂಡದಲ್ಲಿದ್ದಾರೆ.

ಪಂದ್ಯ ನಡೆಯುವ ಸಮಯ: ಮಧ್ಯಾಹ್ನ 1.30

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin