ಸರಳವಾಗಿ 60ನೇ ಹುಟ್ಟಹಬ್ಬ ಆಚರಿಸಿಕೊಂಡ ಮಾಜಿ ಸಚಿವ ಎಚ್.ಡಿ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Revanna--JDS

ಬೆಂಗಳೂರು, ಡಿ.17-ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರು 60ನೇ ವರ್ಷದ ಹುಟ್ಟಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಇಂದು ಮುಂಜಾನೆ ನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಹಾಗೂ ಕೇಕ್ ಕತ್ತರಿಸುವ ಮೂಲಕ ಕುಟುಂಬದ ಸದಸ್ಯರು, ಅಭಿಮಾನಿಗಳು ಮತ್ತು ಪಕ್ಷದ ಮುಖಂಡರೊಂದಿಗೆ ಜನ್ಮದಿನ ರೇವಣ್ಣ ಅವರು ಆಚರಿಸಿಕೊಂಡರು.  ಮಾಜಿ ಸಚಿವರು, ಶಾಸಕರು, ಜೆಡಿಎಸ್ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಉದ್ಯಮಿಗಳು ರೇವಣ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ನಂತರ ರಾಜರಾಜೇಶ್ವರಿ ನಗರದಲ್ಲಿರುವ ರಾಜರಾಜೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ತಂದೆತಾಯಿ ಅವರ ಆಶೀರ್ವಾದ ಪಡೆದರು.

ಜೆಪಿನಗರದಲ್ಲಿರುವ ಮಹಾಲಕ್ಷ್ಮಿ ದೇವಾಲಯ, ಜಯನಗರ 4ನೇ ಬ್ಲಾಕ್‍ನಲ್ಲಿರುವ ಗಣೇಶ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿರುವ ಲಕ್ಷ್ಮಿನರಸಿಂಹ ದೇವಾಲಯ ಹಾಗೂ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯದಲ್ಲಿ ರೇವಣ್ಣ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದರು.

Facebook Comments

Sri Raghav

Admin