ಸರಳ ಹುಟ್ಟುಹಬ್ಬ ಆಚರಣೆಗೆ ಬಿಎಸ್‍ವೈ ನಿರ್ಧಾರ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-002

ಬೆಂಗಳೂರು, ಫೆ.26-ರಾಜ್ಯಾದ್ಯಂತ ಬರ ಆವರಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 74ನೇ ಹುಟ್ಟುಹಬ್ಬವನ್ನು ಈ ಬಾರಿ ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ.   ರಾಜ್ಯ ಬರಗಾಲ ಎದುರಿಸುತ್ತಿರುವುದರಿಂದ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿರುವುದಲ್ಲದೆ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ತುಮಕೂರಿಗೆ ತೆರಳಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರ್ಶೀವಾದ ಪಡೆಯಲಿದ್ದಾರೆ. ನಂತರ ಬೆಳ್ಳಾವೆಯ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಬರಗಾಲದಲ್ಲಿ ಅಗತ್ಯವಾಗಿ ನೆರವೇರಬೇಕಿರುವ ಕೆಲಸಗಳಿಗೆ ಆದ್ಯತೆ ನೀಡಲಾಗುವುದು ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

ತಮ್ಮ ಅಭಿಮಾನಿ ಹಾಗೂ ಕಾರ್ಯಕರ್ತರಿಗೆ ಈ ಬಗ್ಗೆ ಸೂಚನೆ ನೀಡಿರುವ ಅವರು ಹುಟ್ಟುಹಬ್ಬದ ನಿಮಿತ್ತ ತಮಗೆ ಆಹಾರ ತುರಾಯಿಗಳಿಗಾಗಿ ಹಣ ವ್ಯಯಿಸದೆ ಜಾನುವಾರುಗಳಿಗೆ ಮೇವು ಒದಗಿಸಲು ಮುಂದಾಗುವಂತೆ ಕರೆ ನೀಡಿದ್ದಾರೆ.   ರಾಜ್ಯದ ವಿವಿಧೆಡೆ ಮೇವು ವಿತರಣೆ ಹಾಗೂ ಕೆರೆಗಳ ಹೂಳೆತ್ತುವ ಮೂಲಕ ಬರಪರಿಹಾರ ಕಾಮಗಾರಿಯಲ್ಲಿ ತೊಡಗಿಕೊಳ್ಳಲು ಕಾರ್ಯಕರ್ತರು ಸನ್ನದ್ದರಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin