ಸರ್ಕಲ್ ಇನ್‍ಸ್ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆಗೆ ಯಾವುದೇ ಕೌಟುಂಬಿಕ ಕಾರಣಗಳಿರಲಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Raghavendra-2
ಮಾಲೂರು,ಅ.18-ಸರ್ಕಲ್ ಇನ್‍ಸ್ಪೆಕ್ಟರ್ ರಾಘವೇಂದ್ರ ಅವರ ಆತ್ಮಹತ್ಯೆಗೆ ಯಾವುದೇ ಕೌಟುಂಬಿಕ ಕಾರಣಗಳಿಲ್ಲ ಎಂದು ಅವರ ಸಂಬಂಧಿಕರಾದ ಪುರುಷೋತ್ತಮ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಅವರದು ತುಂಬು ಕುಟುಂಬ. ಎಲ್ಲರೂ ಅನ್ಯೋನ್ಯವಾಗಿದ್ದರು. ಕಳೆದ 15 ದಿನಗಳ ಹಿಂದಷ್ಟೇ ರಾಘವೇಂದ್ರ ಅವರ ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು. ಎಲ್ಲ ಸಹೋದರ, ಸಹೋದರಿಯರು, ಸಂಬಂಧಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆವು. ಕೌಟುಂಬಿಕವಾಗಿ ಯಾವುದೇ ಸಮಸ್ಯೆ ಇರಲಿಲ್ಲ. ಆತ್ಮಹತ್ಯೆಗೆ ಕೌಟುಂಬಿಕ ಕಾರಣವೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಘವೇಂದ್ರ ಅವರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ.
ಪತಿ-ಪತ್ನಿ ಚೆನ್ನಾಗಿಯೇ ಇದ್ದರು ಎಂದು ಪುರುಷೋತ್ತಮ್ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin