ಸರ್ಕಾರದಿಂದ ವರ್ಗಾವಣೆ ದಂಧೆ ಬಿಎಸ್‍ವೈ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

yaddyurappa

ಕಡೂರು, ಸೆ.22- ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದು, ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿ ಸ್ವಕ್ಷೇತ್ರದಲ್ಲೂ ಸಿಗದೆ ವಿಧಾನಸೌಧದಲ್ಲೂ ಸಿಗದೆ ರೈತರ ಪಾಲಿಗೆ ಸತ್ತಂತಿದೆ ಈ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪತಿಳಿಸಿದರು.  ಕೃಷಿ ಮಾರುಕಟ್ಟೆ ಆವರಣದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ಮುಖ್ಯಮಂತ್ರಿಗಳು ವೃಥಾ ಕಾಲಹರಣ ಮಾಡದೆ ರೈತರ ನೆರವಿಗೆ ಧಾವಿಸಬೇಕಿದೆ ಎಂದು ತಿಳಿಸಿದರು.

ಜನತೆ ಬೀದಿಗೆ ಇಳಿಯುವ ಮುನ್ನ ರೈತರ ಸಂಕಷ್ಟಕ್ಕೆ ಬರಬೇಕಿದೆ. 82 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ರೈತರು ಉಳುಮೆ ಮಾಡುತ್ತಿದ್ದಾರೆ. ಕೇವಲ 9 ಲಕ್ಷ ಹೆಕ್ಟೇರ್‍ಗೆ ಬೆಳೆ ವಿಮೆ ಮಾಡಲಾಗಿದೆ. ತೆಂಗು, ಈರುಳ್ಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಅಡಿಕೆಗೆ ಬೆಂಬಲ ಬೆಲೆ ದೊರಕಿಸಲು ನಾವುಗಳು ದೆಹಲಿಗೆ ತೆರಳಲಿದ್ದೇವೆ. ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುವುದರ ಮೂಲಕ ಅಡಿಕೆಗೆ ಬೆಂಬಲ ಬೆಲೆ ನೀಡಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.ಕಾವೇರಿ ವಿಷಯದ ಬಗ್ಗೆ ಕೇಸು ಸುಪ್ರೀಂ ಕೋರ್ಟಿನಲ್ಲಿ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ತಿಳಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin