ಸರ್ಕಾರದ ಆದೇಶದಂತೆ ಟಿಪ್ಪು ಜಯಂತಿ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

beluruu

ಬೇಲೂರು, ನ.5- ಟಿಪ್ಪು ಜನ್ಮ ದಿನವನ್ನು ನ.10ರಂದು ಆಚರಿಸಬೇಕೆಂದು ರಾಜ್ಯ ಸರ್ಕಾರದ ಆದೇಶವಿರುವ ಕಾರಣ ಪಟ್ಟಣದ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ಪುಟ್ಟಶೆಟ್ಟಿ ಸ್ಪಷ್ಟಪಡಿಸಿದರು. ಟಿಪ್ಪು ಜಯಂತಿ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಟಿಪ್ಪು ಜಯಂತಿಗೆ ಪರ-ವಿರೋಧಗಳು ಕೇಳಿ ಬರುತ್ತಿರುವುದರಿಂದ ತಾಲೂಕಿನಲ್ಲಿ ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳಿಗೆ ಟಿಪ್ಪು ಬಗ್ಗೆ ಚರ್ಚಾ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಏರ್ಪಡಿಸಲಾಗುವುದು ಎಂದರು.

ವೃತ್ತ ನೀರಿಕ್ಷಕ ಲೋಕೇಶ್ ಮಾತನಾಡಿ, ಟಿಪ್ಪು ಜಯಂತಿ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ತಿಳಿಸಿದರು.ಪುರಸಭೆ ಅಧ್ಯಕ್ಷೆ ಉಮಾ, ತಾಪಂ ಅಧ್ಯಕ್ಷ ತಮ್ಮಣ್ಣಗೌಡ, ಉಪಾಧ್ಯಕ್ಷೆ ತೀರ್ಥಮ್ಮ, ಸದಸ್ಯ ಕಿಟ್ಟಿ, ಟಿಪ್ಪು ವೀರ ಕನ್ನಡ ಸೇನೆ ಅಧ್ಯಕ್ಷ ನೂರ್‍ಅಹಮದ್, ಕರವೇ ಭೋಜೇಗೌಡ, ಕಸಾಪ ಅಧ್ಯಕ್ಷ ದಯಾನಂದ್, ಪಿಎಸ್‍ಐ ಬಾಲು ಮತ್ತಿತರರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin