ಸರ್ಕಾರದ ಮುಖ್ಯಕಾರ್ಯದರ್ಶಿ ಭೂ ಹಗರಣ : ಡಿಸಿ ಕಚೇರಿಗೆ ಎಸಿಬಿ ದಾಳಿ..!

ಈ ಸುದ್ದಿಯನ್ನು ಶೇರ್ ಮಾಡಿ

s -Aravind-Jadav-001

ಬೆಂಗಳೂರು, ಆ.24- ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾದವ್ ಅವರ ವಿರುದ್ಧ ಕೇಳಿಬಂದಿ ರುವ ಭೂ ಅಕ್ರಮ ಪ್ರಕರಣದ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಮೇಲೆ ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು.  ಆದರೆ, ಎಸಿಬಿ ಅಧಿಕಾರಿಗಳ ದಾಳಿ ವೇಳೆ ಜಿಲ್ಲಾಧಿಕಾರಿ ಕಚೇರಿಯ ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದರು. ಆರ್ಟಿಐ ಕಾರ್ಯಕರ್ತ ಭಾಸ್ಕರ್ ನಿನ್ನೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿ ಆನೇಕಲ್ ತಾಲ್ಲೂಕು ಸರ್ಜಾಪುರ ಹೋಬ ಳಿಯ ರಾಮನಾಯಕನಹಳ್ಳಿಯ ಸರ್ವೆ ನಂ.29ರಲ್ಲಿ ಇರುವ 74 ಎಕರೆ ಸರ್ಕಾರಿ ಭೂಮಿಯಲ್ಲಿ 8 ಎಕರೆ 3ಗುಂಟೆ ಜಮೀನನ್ನು ಅಕ್ರಮವಾಗಿ ಅರವಿಂದ್ಜಾದವ್ ಅವರ ತಾಯಿ ಹೆಸರಿಗೆ
ಪೋಡಿ ಮಾಡಿಸಿಕೊಂಡು ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿರುವ ಜಾದವ್ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದರು.

ನಗರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್ ಸೇರಿದಂತೆ ಅನೇಕ ಅಧಿಕಾರಿಗಳು ಸಹ ಅಧಿಕಾರ ದುರುಪಯೋಗ ಪಡಿಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದಾರೆ ಎಂದು ದೂರಲಾಗಿತ್ತು.  ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಓರ್ವ ಡಿವೈಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ಗಳ ನೇತೃತ್ವದ ಎಸಿಬಿ ತಂಡ ಭೂ ದಾಖಲೆಗಳ ಪರಿಶೀಲನೆ ನಡೆಸಿತು.
ಅರವಿಂದ್ ಜಾದವ್ ಅವರ ಭೂ ಅಕ್ರಮ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಒಂದೆಡೆ ಕಂದಾಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೆ, ಮತ್ತೊಂದೆಡೆ ದೂರು ನೀಡಿರುವ ಹಿನ್ನೆಲೆಯಲ್ಲಿ ಎಸಿಬಿ ಜಿಲ್ಲಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ಕಚೇರಿಯ ಅಧಿಕಾರಿಗಳು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳಿಗೆ ಸಿಗಬೇಕಾಗಿದ್ದ ದಾಖಲೆಗಳು ಲಭ್ಯವಾಗಿಲ್ಲ ಎನ್ನಲಾಗಿದೆ.

ಎಸಿಬಿ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಜನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ್ದರು. ಪ್ರಮುಖ ಅಧಿಕಾರಿಗಳೇ ಸ್ಥಳದಲ್ಲಿ ಇಲ್ಲದೇ ಇದ್ದುದ್ದರಿಂದ ಎಸಿಬಿ ಅಧಿಕಾರಿಗಳು ಔಪಚಾರಿಕ ಪರಿಶೀಲನೆ ನಡೆಸಿ ಅಲ್ಲಿಂದ ತೆರಳಿದ್ದಾರೆ.  ಮುಖ್ಯಕಾರ್ಯದರ್ಶಿಗಳ ವಿರುದ್ಧ ದೂರು ಬಂದಿರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲು ದೂರಿನ ಸತ್ಯಾಸತ್ಯತೆ ತಿಳಿಯಲು ಈ ದಾಳಿ ನಡೆಸಲಾಗಿದೆ.  ಭಾಸ್ಕರ್ ಅವರು ತಮ್ಮ ದೂರಿನಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳ ವರದಿಯನ್ನೂ ಸಹ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಈ ದೂರಿನಲ್ಲಿ ಪ್ರದೇಶದ ಜಮೀನನ್ನು ಅಕ್ರಮವಾಗಿ ನಕಲಿ ದಾಖಲೆ ಬಳಸಿ ಆರ್ಟಿಸಿ ನೀಡಲಾಗಿದೆ ಎಂಬ ಆರೋಪ ಮಾಡಲಾಗಿದೆ.  ಮುಖ್ಯಾಧಿಕಾರಿಯಿಂದ ಹಿಡಿದು ತಹಸೀಲ್ದಾರ್ವರೆಗಿನ ಅಧಿಕಾರಿಗಳ ಹೆಸರುಗಳನ್ನು ದೂರಿನಲ್ಲಿ ಉಲ್ಲೇಖಿಸಿರುವುದು ಎಸಿಬಿಗೆ ಸವಾಲಾಗಿ ಪರಿಣಮಿಸಿದೆ.

► Follow us on –  Facebook / Twitter  / Google+

Facebook Comments

Sri Raghav

Admin