ಸರ್ಕಾರಿ,ಖಾಸಗಿ ಬಸ್,ಲಾರಿ,ಶಾಲಾ ವಾಹನಗಳಲ್ಲಿ ಅಗ್ನಿಶಾಮಕ ಉಪಕರಣ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--01

ಬೆಂಗಳೂರು, ಫೆ.23- ನೆಲಮಂಗಲ ಬಳಿ ಕೆಎಸ್‍ಆರ್‍ಟಿಸಿ ಬಸ್ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು, ಲಾರಿ ಹಾಗೂ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಅಗ್ನಿಶಾಮಕ ಉಪಕರಣಗಳನ್ನು ಅಳವಡಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.  ಖಾಸಗಿ ಬಸ್, ಲಾರಿಗಳಲ್ಲಿ ತುರ್ತಾಗಿ ಅಗ್ನಿಶಾಮಕ ಉಪಕರಣ ಅಳವಡಿಸಬಹುದು. ಆದರೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ 24,000 ಬಸ್‍ಗಳಿದ್ದು, ಟೆಂಡರ್ ಪ್ರಕ್ರಿಯೆ ಮೂಲಕ ಉಪಕರಣಗಳನ್ನು ಖರೀದಿಸಬೇಕಾಗುತ್ತದೆ. ಇದಕ್ಕೆ ಕಾಲಾವಕಾಶ ಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇತ್ತೀಚೆಗಷ್ಟೆ ನೆಲಮಂಗಲ ಬಳಿ ಕೆಎಸ್‍ಆರ್‍ಟಿಸಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ವಿಧಿ-ವಿಜ್ಞಾನ ಪ್ರಯೋಗಾಲಯದ ವರದಿ  ಬರಲಿದ್ದು, ಸ್ಪಷ್ಟ ಕಾರಣ ತಿಳಿದುಬರಲಿದೆ ಎಂದು ತಿಳಿಸಿದರು.

ಪ್ರಾಥಮಿಕ ವರದಿ ಪ್ರಕಾರ, ಬಸ್‍ನ ಎಂಜಿನ್, ಡೀಸೆಲ್, ಟಯರ್‍ಗಳು ಸೇರಿದಂತೆ ಯಾವುದೇ ತಾಂತ್ರಿಕ ದೋಷಗಳಿಂದ ಬಸ್‍ಗೆ ಬೆಂಕಿ ಹೊತ್ತಿಕೊಂಡಿಲ್ಲ. ಆದರೆ, ಬಸ್‍ನ ಮಧ್ಯಭಾಗದಲ್ಲಿದ್ದ ಪೂಜಾ ಸಾಮಗ್ರಿಗಳಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದರು.  ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅಗ್ನಿ ದುರಂತಗಳನ್ನು ತಡೆಗಟ್ಟಲು ಬಸ್‍ಗಳಲ್ಲಿ ತುರ್ತು ಬಾಗಿಲುಗಳನ್ನು ಅಳವಡಿಸಲಾಗುವುದು. ಅಲ್ಲದೆ, ಬಸ್‍ಗಳಲ್ಲಿ ಸಾಗಿಸುವ ಲಗೇಜ್‍ಗಳನ್ನು ಪರಿಶೀಲಿಸುವಂತೆ ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ ಎಂದರು.

5550 ಹೊಸ ಬಸ್‍ಗಳ ಸೇರ್ಪಡೆ:

ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 5550 ಬಸ್‍ಗಳನ್ನು ಖರೀದಿಸಲಾಗುವುದು. ಮುಂದಿನ ತಿಂಗಳು 3000 ಬಸ್‍ಗಳು ಸಂಚಾರ ಆರಂಭಿಸಲಿವೆ. ಇನ್ನುಳಿದ ಬಸ್‍ಗಳು ಜೂನ್ ಅಂತ್ಯದೊಳಗೆ ಸಂಚಾರ ಆರಂಭಿಸಲಿದ್ದು, ಬೆಂಗಳೂರು-ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಮಾರ್ಗಗಳಲ್ಲಿ ಸಂಚರಿಸಲಿವೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin