ಸರ್ಕಾರಿ ಆಸ್ಪತ್ರೆಗಳಲ್ಲಿನ ಸಿಬ್ಬಂದಿ ಕೊರತೆ ನಿವಾರಿಸಿ : ಸರ್ಕಾರಕ್ಕೆ ಹೆಚ್‍ಡಿಕೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy

ಬೆಂಗಳೂರು,ಆ.7-ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆಯನ್ನು ನಿವಾರಿಸಿ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್‍ಕುಮಾರ್ ಅವರು ಆಸ್ಪತ್ರೆಗಳಿಗೆ ಸೂಕ್ತ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ತೀವ್ರ ನಿಗಾ ಘಟಕ ಸ್ಥಾಪಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಇಂದೇ ಅನುದಾನ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.  ಅನುದಾನ ನೀಡಿದರೂ ಸಮಸ್ಯೆ ಬಗೆಹರಿಯುವುದಿಲ್ಲ. ಸಿಬ್ಬಂದಿ ಕೊರತೆ ಸಾಕಷ್ಟಿದೆ. ಆಸ್ಪತ್ರೆಗಳಲ್ಲಿ ಸೂಕ್ತ ವಿದ್ಯುತ್ ಪೂರೈಕೆ ಇಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಇದೆ. ರಾಮನಗರ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ತಾವೇ ಜನರೇಟರ್ ಕೊಡಿಸಿರುವುದಾಗಿ ಹೇಳಿದರು.
ಇತ್ತೀಚೆಗೆ ಆರೋಗ್ಯ ಸಚಿವ ರಮೇಶ್‍ಕುಮಾರ್ ಅವರು ತೀವ್ರ ನಿಗಾಘಟಕಗಳಿಗೆ ಅನುದಾನ ನೀಡುವಲ್ಲಿ ಶಾಸಕರು, ಸಂಸದರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ತೀವ್ರ ನಿಗಾ ಘಟಕಕ್ಕೆ ಸಚಿವರು, ಶಾಸಕರು, ಸಂಸದರು ಸೇರಿದಂತೆ ಕೇವಲ 26 ಮಂದಿ ಮಾತ್ರ ಇದುವರೆಗೆ ತಮ್ಮ ನಿಧಿಯಿಂದ ಅನುದಾನ ನೀಡಿದ್ದಾರೆ ಎಂದು ರಮೇಶ್‍ಕುಮಾರ್ ಅಧಿಕೃತವಾಗಿ ಪ್ರಕಟಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin