ಸರ್ಕಾರಿ ಉದ್ಯೋಗವನ್ನೇ ನೆಚ್ಚಿ ಕೂರದಿರಲು ಕರೆ

ಈ ಸುದ್ದಿಯನ್ನು ಶೇರ್ ಮಾಡಿ

govt-job
ತಿ.ನರಸೀಪುರ, ಅ.24- ವಿದ್ಯಾವಂತ ಯುವಕರು ಸರ್ಕಾರಿ ಉದ್ಯೋಗವನ್ನೇ ಅವಲಂಬಿಸದೆ ಸ್ವಯಂ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸಬಲರಾಗಬೇಕೆಂದು ತಾಲೂಕು ಪಂಚಾಯಿತಿ ಸದಸ್ಯ ಕುಕ್ಕೂರು ಗಣೇಶ್ ಕರೆ ನೀಡಿದರು.  ಪಟ್ಟಣದ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ನಿರುದ್ಯೋಗಿ ಯುವಜನರಿಗೆ ಉಚಿತವಾಗಿ ಹಮ್ಮಿಕೊಳ್ಳಲಾಗಿದ್ದ ಉದ್ಯಮಶೀಲತಾ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದ ವಿದ್ಯಾವಂತ ಯುವಕ, ಯುವತಿಯರ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಂತೆ ಕರ್ನಾಟಕ ರಾಜ್ಯದಲ್ಲಿ ಸಂಜೀವಿನಿ ಯೋಜನೆಯಡಿ ಪ್ರತಿ ಗ್ರಾಪಂ ವ್ಯಾಪ್ತಿಯಿಂದ 50 ನಿರುದ್ಯೋಗಿಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಹತೆಗೆ ತಕ್ಕಂತೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ನೀಡುತ್ತಿದೆ ಎಂದರು.  ಸ್ವಯಂ ಉದ್ಯೋಗ ಕೈಕೊಳ್ಳಲು ಯುವಕರಿಗೆ ತರಬೇತಿ ನೀಡಿ ಬ್ಯಾಂಕ್‍ಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.  ಜಿಪಂ ಸದಸ್ಯೆ ಮಂಗಳಮ್ಮ ಮಹದೇವಸ್ವಾಮಿ, ಸಂಜೀವಿನಿ ತಾಲ್ಲೂಕು ಯೋಜನಾಧಿಕಾರಿ ರೂಪಾಶ್ರೀ, ಸುರೇಶ್, ಯರಗನಹಳ್ಳಿ ಬಿ.ಮಹದೇವಸ್ವಾಮಿ, ಸೋಸಲೆ ಶ್ರೀನಿವಾಸ್‍ಮೂರ್ತಿ, ಕೋಮಲಾಕ್ಷಿ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಹದೇವು, ಬನ್ನೂರು ಹುಚ್ಚೇಗೌಡ, ಅತ್ತಹಳ್ಳಿ ಶಿವನಂಜು, ಹೊನ್ನಮ್ಮ, ಭಾಗ್ಯ, ರಾಜೇಶ್, ಪದ್ಮಮ್ಮ, ಮತ್ತಿತರರು ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin