ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ಕಡ್ಡಾಯ : ಸವಾಲು ಎದುರಿಸಲು ಸಜ್ಜಾಗಿ

ಈ ಸುದ್ದಿಯನ್ನು ಶೇರ್ ಮಾಡಿ

kastui-rangan-report
ಬೆಂಗಳೂರು, ನ.5- ಜಾಗತೀಕರಣದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮುಂದೆ ಈ ಕ್ಷೇತ್ರದಲ್ಲಿ ಎದುರಾಗಬಹುದಾದ ಕ್ಲಿಷ್ಟಕರ ಪರಿಸ್ಥಿತಿ ಎದುರಿಸಲು ಸಜ್ಜಾಗಬೇಕಿದೆ ಎಂದು ಜ್ಞಾನ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇಂದು ಜ್ಞಾನ ಆಯೋಗ ಸಮಿತಿ ಕೊಠಡಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ಅವರನ್ನು ಭೇಟಿ ಮಾಡಿದ ಆಯೋಗದ ಅಧ್ಯಕ್ಷ ಕಸ್ತೂರಿರಂಗನ್ ಅವರು ಸಲ್ಲಿಸಿದ ವರದಿಯಲ್ಲಿ ಈ ಶಿಫಾರಸು ಮಾಡಲಾಗಿದೆ.

ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸಲು ಖಾಸಗಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ತಾರತಮ್ಯವಿರದಂತೆ ಏಕರೂಪದ ಶಿಕ್ಷಣ ಕ್ರಮ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಪಠ್ಯಕ್ರಮ ಅಭಿವೃದ್ಧಿಪಡಿಸುವ ಅಗತ್ಯವಿದೆ. ಶಿಕ್ಷಣ ಕ್ಷೇತ್ರದಲ್ಲಿನ ಮುಂದಿನ ಸವಾಲುಗಳನ್ನು ಎದುರಿಸಲು ಇಂತಹ ಶಿಕ್ಷಣ ಪದ್ಧತಿ ಅಗತ್ಯವಾಗಿರುವ ಜತೆಗೆ ಜಾಗತಿಕ ಮಟ್ಟದಲ್ಲಿ ಶೈಕ್ಷಣಿಕ ರಂಗದಲ್ಲಿ ಬೆಳೆಯಲು ಅನುಕೂಲವಾಗಲಿದೆ. ಇಲ್ಲದಿದ್ದಲ್ಲಿ ಶಿಕ್ಷಕರು, ಫೋಷಕರು, ವಿದ್ಯಾರ್ಥಿಗಳು ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ.

ಮುಂದಿನ 10 ವರ್ಷಗಳಲ್ಲಿ ರಾಜ್ಯದ ಒಟ್ಟಾರೆ ಜನಸಂಖ್ಯೆ 7.5 ಕೋಟಿ ಮುಟ್ಟಲಿದ್ದು, ಪ್ರತೀ ವರ್ಷ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಲಿದೆ. ಶೇ.20ರಿಂದ 30ರಷ್ಟು ಹಣವನ್ನು ಶಿಕ್ಷಣಕ್ಕಾಗಿ ವ್ಯಯಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ನಿರ್ವಹಿಸಬೇಕಿದೆ.
ರಾಜ್ಯಾದ್ಯಂತ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸರ್ಕಾರದ ಮಟ್ಟದಲ್ಲಿ ಆರಂಭಿಸುವುದರಿಂದ ಕಲಿಕೆಯ ವೇಗ ಹೆಚ್ಚುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.  ವಿದ್ಯಾರ್ಥಿನಿಯರಿಗೆ 15 ವರ್ಷಗಳ ಕಾಲ ಕಡ್ಡಾಯ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಭದ್ರಗೊಳಿಸಬೇಕು. ಸುಧಾರಿತ ಶಿಕ್ಷಣ ಪದ್ಧತಿ ಜಾರಿಗೊಳಿಸಬೇಕು. ತಂತ್ರಜ್ಞಾನ ಮತ್ತು ಜಾಗತಿಕ ಸವಾಲುಗಳನ್ನು ನಿರ್ವಹಿಸಲು ಸಜ್ಜುಗೊಳಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ.

ಈ ನಿಟ್ಟಿನಲ್ಲಿ ಹೆಣ್ಣುಮಕ್ಕಳಿಗೆ ಪಿಯುಸಿ ನಂತರದ ಮೂರು ವರ್ಷಗಳ ಶಿಕ್ಷಣವೂ ಕಡ್ಡಾಯವಾಗಬೇಕು ಎಂದು ಶಿಫಾರಸು ಮಾಡಲಾಗಿದೆ. ವರದಿ ಸ್ವೀಕರಿಸಿ ಮಾತನಾಡಿದ ಸಚಿವ ತನ್ವೀರ್‍ಸೇಠ್, ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ಕೇಂದ್ರದೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು. ಸಚಿವ ಬಸವರಾಜರಾಯರೆಡ್ಡಿ ಮಾತನಾಡಿ, ಜ್ಞಾನ ಆಯೋಗದ ಶಿಫಾರಸುಗಳ ಜಾರಿಗೆ ಸಚಿವರ ತಂಡವನ್ನು ರಚಿಸಿ ವರದಿಯನ್ನು ಸಂಪುಟದ ಮುಂದಿಟ್ಟು ಅಂಗೀಕಾರ ಪಡೆಯಲಾಗುವುದು ಎಂದರು.ಜ್ಞಾನ ಆಯೋಗದ ಸದಸ್ಯರು, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin