ಸರ್ಕಾರಿ ಶಾಲೆ ಆವರಣದಲ್ಲೇ ಮನೆ ಕಟ್ಟಿಸಿಕೊಂಡ ಭೂಪ..!

ಈ ಸುದ್ದಿಯನ್ನು ಶೇರ್ ಮಾಡಿ

Govt-School--01ಹಾಸನ, ಜು.16- ಜಿಲ್ಲೆಯ ವಿಶ್ವನಾಥನಗರದಲ್ಲಿ ವ್ಯಕ್ತಿಯೊಬ್ಬ ಸರ್ಕಾರಿ ಶಾಲೆ ಆವರಣದಲ್ಲೇ ಮನೆ ಕಟ್ಟಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆ ಆವರಣದಲ್ಲಿ ಅಂಗನವಾಡಿ ಕೇಂದ್ರ ಕಟ್ಟಿಸಿಕೊಡುತ್ತೇನೆ ಎಂದು ಹೇಳಿ ತಾನೇ ಮನೆಯನ್ನು ಕಟ್ಟಿಸಿಕೊಂಡಿದ್ದಾನೆ.  ಈ ಬಗ್ಗೆ ತೀವ್ರ ಆಕ್ರೋಶಗೊಂಡ ಸಾರ್ವಜನಿಕರು ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಮನೆಯ ಕಾಂಪೌಂಡ್‍ನ್ನು ಕೆಡವಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಮನೆಯಲ್ಲಿ ವಾಸವಾಗಿದ್ದ ಆ ವ್ಯಕ್ತಿ ಪರಾರಿಯಾಗಿದ್ದಾನೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin