ಸರ್ಜಿಕಲ್ ಸ್ಟ್ರೈಕ್ ಎಫೆಕ್ಟ್ : ಮಣಿಪುರ, ಗೋವಾ, ಉತ್ತರಾಖಂಡ್ ಚುನಾವಣೆಯಲ್ಲಿ ಬಿಜೆಪಿಗೆ ವರದಾನ

ಈ ಸುದ್ದಿಯನ್ನು ಶೇರ್ ಮಾಡಿ

Surgical-Efect

ನವದೆಹಲಿ, ಅ.15-ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿ ಬಿಜೆಪಿಗೆ ಅನುಕೂಲವಾಗಲಿದೆಯೇ? ತಕ್ಷಣವೇ ಮಣಿಪುರ, ಗೋವಾ ಮತ್ತು ಉತ್ತರಾಖಂಡ್‍ನ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸ್ಪಷ್ಟ ಬಹುಮತಗಳ ಮೂಲಕ ಅಧಿಕಾರ ಹಿಡಿಯಲಿದೆ ಎಂದು ಇಂಡಿಯಾ ಟುಡೇ-ಆಕ್ಸೀಸ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ.  ಉಗ್ರರ ಶಿಬಿರಗಳ ಮೇಲೆ ಸೈನಿಕರು ನಡೆಸಿದ ದಾಳಿ ಮತದಾರರ ಮೇಲೆ ವ್ಯಾಪಕ ಪರಿಣಾಮ ಬೀರಿದೆ. ಆಡಳಿತ ವಿರೋಧ ಅಲೆಯ ನಡುವೆಯೂ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಮಲ ಅರಳಲಿದೆ. ಇನ್ನು ಗಿರಿಶಿಖರಗಳ ತವರೂರು ಉತ್ತರಾಖಂಡ್‍ನಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ಯಾರ್ಯಾರಿಗೆ ಎಷ್ಟೆಷ್ಟು?:
ಈಶಾನ್ಯ ಭಾರತದ ಪುಟ್ಟ ರಾಜ್ಯ ಮಣಿಪುರದ ಒಟ್ಟು 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 31ರಿಂದ 35, ಕಾಂಗ್ರೆಸ್ 19ರಿಂದ 24, ಎನ್‍ಪಿಎಫ್ 3ರಿಂದ 5 ಹಾಗೂ ಇತರರು 2-4 ಸ್ಥಾನ ಪಡೆಯಲಿದ್ದಾರೆ.  ಬಿಜೆಪಿ ಪರ ಶೇ.40ರಷ್ಟು ಮತಗಳು ಚಲಾವಣೆಯಾದರೆ ಕಾಂಗ್ರೆಸ್ ಶೇ.37 ಹಾಗೂ ಇತರರು ಶೇ.23ರಷ್ಟು ಮತ ಪಡೆಯಲಿದ್ದಾರೆ.

ಗೋವಾದಲ್ಲಿ ಕಮಲ:
ಪ್ರವಾಸಿಗರ ಸ್ವರ್ಗ ಎನಿಸಿಕೊಂಡಿರುವ ಗೋವಾದಲ್ಲಿ ತಕ್ಷಣವೇ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ ಸರಳ ಬಹುಮತದ ಮೂಲಕ 2ನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಲಿದೆ.
ರಾಜ್ಯದ ಒಟ್ಟು 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 17-21,ಕಾಂಗ್ರೆಸ್ 13-17, ಎಎಪಿ 1-3 ಹಾಗೂ ಇತರರು 3-5 ಸ್ಥಾನ ಪಡೆಯಲಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಲ್ಲಿ ಬಹುತೇಕ ಮತದಾರರು ಹಾಲಿ ಸಿಎಂ ಲಕ್ಷ್ಮಿಕಾಂತ್ ಪರ್ಸೇಕರ್‍ಗೆ ಒಲವು ತೋರಿದ್ದಾರೆ.  2ನೇ ಸ್ಥಾನದಲ್ಲಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ನಂತರದ ಸ್ಥಾನದಲ್ಲಿದ್ದಾರೆ.

ಉತ್ತರಾಖಂಡ್‍ನಲ್ಲಿ ಬಿಜೆಪಿ:
ಅತಂತ್ರ ಸ್ಥಿತಿಯಿಂದಲೇ ದೇಶದ ಗಮನ ಸೆಳೆದಿದ್ದ ಉತ್ತರಾಖಂಡ್‍ನಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ಖಚಿತವಾಗಿದೆ.  ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 38-43 ಸ್ಥಾನ ಪಡೆದರೆ, ಕಾಂಗ್ರೆಸ್ 26-31 ಸ್ಥಾನ ಪಡೆದು ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಯಿದೆ.  ರಾಜ್ಯಕ್ಕೆ ಹಿರಿಯ ಮುಖಂಡ ಬಿ.ಸಿ.ಖಂಡೂರಿ ಮುಖ್ಯಮಂತ್ರಿಯಾಗಬೇಕೆಂದು ಬಹುತೇಕರು ಒಲವು ತೋರಿದ್ದಾರೆ. ಹಾಲಿ ಮುಖ್ಯಮಂತ್ರಿ ಹರೀಶ್ ರಾವತ್‍ಗೆ ಆಡಳಿತ ವಿರೋಧಿ ಅಲೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುತ್ತಿಲ್ಲ.

► Follow us on –  Facebook / Twitter  / Google+

Facebook Comments

Sri Raghav

Admin